ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ವಸತಿ ಶಾಲೆಯ ಮಕ್ಕಳಿಂದ ಶೌಚಾಲಯ ಗುಂಡಿಯನ್ನು ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ವಿಚಾರ ನನ್ನ ಗಮನಕ್ಕೆ ಬಂದಿದೆ.ವರದಿಯನ್ನು ತರಿಸಿಕೊಳ್ಳುತ್ತೇನೆ ಎಂದು ಹುಬ್ಬಳ್ಳಿ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುತ್ತೇವೆ.ನಿನ್ನೆ ಆರೋಗ್ಯ ಇಲಾಖೆಯ ಸಚಿವರ ಜೊತೆ ನಾನು ಮಾತನಾಡಿದ್ದೇನೆ.ತಜ್ಞರ ಜೊತೆ ಸಭೆ ಮಾಡಲು ಸೂಚಿಸಿದ್ದೇನೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Latest Indian news

Popular Stories