Hubballi

ಹುಬ್ಬಳ್ಳಿ :ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ವ್ಯಕ್ತಿಯೋರ್ವನಿಂದ 96 ಸಾವಿರ ರೂಪಾಯಿ ವಂಚನೆ

ಹುಬ್ಬಳ್ಳಿ :ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ ಎಂದು ನಿರಂತರ ಬೆದರಿಸಿ ದುಷ್ಕರ್ಮಿಗಳು ವ್ಯಕ್ತಿಯೋರ್ವನಿಂದ 96 ಸಾವಿರ ರೂಪಾಯಿ ಪಡೆದು ವಂಚಿಸಿದ್ದಾರೆ.

ರಂಜೀತನಾಥ ಎಂಬ ವ್ಯಕ್ತಿಯನ್ನು ದುಷ್ಕರ್ಮಿ ಗಳು ವಂಚಿಸಿದ್ದಾರೆ., ಅಪರಿಚಿತರು ಫೇಸ್‌ಬುಕ್ ಮೂಲಕ ಕರೆ ಮಾಡಿದ್ದಾರೆ.ಕರೆ ಸ್ವೀಕರಿಸಿದಾಗ ಬೆತ್ತಲೆ ಇರುವ ದೃಶ್ಯ ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ಅಶ್ಲೀಲ ದೃಶ್ಯ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ದುಷ್ಕರ್ಮಿಗಳು. ಹಣ ಕೊಡಲು ನಿರಾಕರಿಸಿದಾಗ ಅಶ್ಲೀಲ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಒಡ್ಡಿದ್ದಾರೆ. ಅಷ್ಟೇ ಅಲ್ಲದೆ ಕುಟುಂಬಕ್ಕೆ ತೋರಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆ ರಂಜೀತನಾಥ 96 ಸಾವಿರ ರೂಪಾಯಿ ಕೊಟ್ಟಿದ್ದು, ಮತ್ತೆ ಹಣದ ಬೇಡಿಕೆ ಇಟ್ಟ ಹಿನ್ನೆಲೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button