Hubballi

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ.

ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ ದುವರ್ತನೆ ತೋರಿದ್ದಾನೆ. ಬಾಲಕಿಯ ಪೋಷಕರು ಅನುಚಿತ ವರ್ತನೆ ತೋರಿರುವ ಎಚ್‌ಸಿಗೆ ಧರ್ಮದೇಟು ನೀಡಿದ್ದಾರೆ. ಅಲ್ಲದೇ ಕೇಶ್ವಾಪುರ ಪೊಲೀಸರಿಗೆ ಅವನನ್ನು ಒಪ್ಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ‌.

ಈ ಘಟನೆಗೆ ಸಂಬಂಧಿಸಿ ಹು-ಧಾ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ ಆತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button