ಇಸ್ಲಾಮಾಬಾದ್ : ಪಾಕಿಸ್ಥಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ಥಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರು ಚುನಾವಣಾ ಆಯೋಗದ ಹೊರಗೆ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಬುಧವಾರ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಬಂಧನ ಭೀತಿ ಎದುರಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ವಜೀರಾಬಾದ್‌ನಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡಿದ್ದ ಇಮ್ರಾನ್ ಖಾನ್ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಪಡೆದಿದ್ದರು.
ಎಟಿಸಿ ನ್ಯಾಯಾಧೀಶ ರಾಜಾ ಜವಾದ್ ಅಬ್ಬಾಸ್ ಹಾಸನ್ ಅವರು ಪಾಕಿಸ್ಥಾನದ ಮಾಜಿ ಪ್ರಧಾನಿಗಾಗಿ ಒಂದೂವರೆ ಗಂಟೆಗಳ ಕಾಲ ಕಾದ ನಂತರ ಅವರ ವಿರುದ್ಧ ತೀರ್ಪು ಪ್ರಕಟಿಸಿದ್ದು, ಇಂದಿನ ಆದೇಶದ ನಂತರ ಇಮ್ರಾನ್ ಖಾನ್ ಬಂಧನಕ್ಕೆ ಗುರಿಯಾಗಬಹುದು ಎಂದು ವರದಿಗಳು ಹೇಳಿವೆ.
ಬಂಧನದಿಂದ ತಪ್ಪಿಸಕೊಳ್ಳಲು ಪಿಟಿಐ ಮುಖ್ಯಸ್ಥ ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ನಲ್ಲಿ ಆದೇಶವನ್ನು ಪ್ರಶ್ನಿಸಬಹುದಾಗಿದೆ.