ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ಭಾರತೀಯ ಮೂಲದ ಮಹಿಳೆ(66ವರ್ಷ)ಯನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ವಾಯುವ್ಯ ಲಂಡನ್‌ ನ ಬಸ್‌ ನಿಲ್ದಾಣದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಈ ಘಟನೆ ಮೇ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ಯುವಕನನ್ನು ಬಂಧಿಸಿ, ಕೊಲೆ ಆರೋಪ ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.
ಮೃತ ಮಹಿಳೆಯನ್ನು ಅನಿತಾ ಮುಖೈ ಎಂದು ಗುರುತಿಸಲಾಗಿದೆ. ಈಕೆ ನ್ಯಾಷನಲ್‌ ಹೆಲ್ತ್‌ ಸರ್ವೀಸ್‌ ನಲ್ಲಿ ಮೆಡಿಕಲ್‌ ಸೆಕ್ರೆಟರಿಯಾಗಿ(ಪಾರ್ಟ್‌ ಟೈಮ್)‌ ಕಾರ್ಯನಿರ್ವಹಿಸುತ್ತಿದ್ದರು. ಲಂಡನ್‌ ನ ಎಡ್ಗೇರ್‌ ಪ್ರದೇಶದ ಬ್ರಂಟ್‌ ಓಕ್‌ ಬ್ರಾಡ್‌ ವೇ ಬಸ್‌ ನಿಲ್ದಾಣದಲ್ಲಿ ಬಸ್‌ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ದಿಢೀರನೆ ಬಂದು ಚೂರಿಯಿಂದ ಇರಿದುಬಿಟ್ಟಿರುವುದಾಗಿ ವರದಿ ವಿವರಿಸಿದೆ.

ಕುತ್ತಿಗೆ ಮತ್ತು ಎದೆಗೆ ಇರಿದ ಪರಿಣಾಮ ಆಕೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಆರೋಪಿ ವಿರುದ್ಧ ಕೊಲೆ ಮತ್ತು ಮಾರಕ ಆಯುಧ ಹೊಂದಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

Latest Indian news

Popular Stories