ಅಯೋದ್ಯೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ; ರಾಮಮಂದಿರಕ್ಕೆ ಪ್ರಧಾನಿ ಮೋದಿ ಆಗಮನ

ಲಕ್ನೋ(ಅಯೋಧ್ಯೆ):ಇಂದು (ಜನವರಿ 22) 12-20ರಿಂದ 12-50ರೊಳಗೆ ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದು, ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಗಣ್ಯರು ಹಾಜರಿರಲಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಲ್ಲಿ ಭದ್ರತೆ ಸೇರಿದಂತೆ ಎಲ್ಲಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ನಂತರ ಹೆಲಿಕ್ಯಾಪ್ಟರ್‌ ಮೂಲಕ ಅಯೋಧ್ಯೆಗೆ ಆಗಮಿಸಿದ್ದಾರೆ.

ನಂತರ ರಾಮಮಂದಿರದಲ್ಲಿ 11ಗಂಟೆಯಿಂದ 12ಗಂಟೆವರೆಗೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ತದನಂತರ ಪ್ರಾಣಪ್ರತಿಷ್ಠೆ ಕಾರ್ಯಕ್ಕೆ ಕೈಜೋಡಿಸಲಿದ್ದಾರೆ.1ಗಂಟೆಯ ಬಳಿಕ ಪ್ರಧಾನಿ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಐತಿಹಾಸಿಕ ದಿನಕ್ಕೆ ಸಾಕ್ಷಿಯಾಗಿರುವ ಅಯೋಧ್ಯೆ ನಗರಿ ಸಂಪೂರ್ಣವಾಗಿ ಸಾವಿರಾರು ಕ್ವಿಂಟಾಲ್‌ ಹೂಗಳಿಂದ ಅಲಂಕೃತಗೊಂಡಿದೆ. ಅಯೋಧ್ಯೆ ಸೇರಿದಂತೆ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಮ ಮಂತ್ರ ಮೊಳಗುತ್ತಿದೆ.

Latest Indian news

Popular Stories