ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ತುರ್ತು ಭೂ ಸ್ಪರ್ಶ

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ತುರ್ತು ಭೂ ಸ್ಪರ್ಶ ಮಾಡಿದೆ.

6ಇ 5314 ಸಂಖ್ಯೆಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ 6ಇ 5314ಗೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ಇಳಿದ ನಂತರ, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು ಮತ್ತು ಭದ್ರತಾ ಏಜೆನ್ಸಿಯ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಬೇಗೆ ಕರೆದೊಯ್ಯಲಾಯಿತು” ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

Latest Indian news

Popular Stories