ನೈರೋಬಿ: ಕೀನ್ಯಾದ ರಾಜಧಾನಿ ನೈರೋಬಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, 165ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಈ ಘಟನೆ ಗುರುವಾರ ಮಧ್ಯರಾತ್ರಿ (ಸ್ಥಳೀಯ ಕೀನ್ಯಾ ಸಮಯ) ನಡೆದಿದೆ.
ನೈರೋಬಿಯ ಎಂಬಕಾಸಿ ನೆರೆಹೊರೆಯಲ್ಲಿರುವ ಅನಿಲ ಮರುಪೂರಣ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ ಎಂದು ವಕ್ತಾರರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಭಾರಿ ಸ್ಫೋಟದ ಕ್ಷಣವನ್ನು ತೋರಿಸಲಾಗಿದ್ದು, ಇದು ಆ ಪ್ರದೇಶದಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.