
INTERNATIONALFeatured Story
ಇಮ್ರಾನ್ ಖಾನ್ ನಾಮಪತ್ರ ತಿರಸ್ಕರಿಸಿದ ಪಾಕಿಸ್ತಾನದ ಚುನಾವಣಾ ಆಯೋಗ
2024 ರ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಲ್ಲಿಸಿದ್ದ ನಾಮಪತ್ರವನ್ನು ಪಾಕಿಸ್ತಾನದ ಚುನಾವಣಾ ಆಯೋಗ ತಿರಸ್ಕರಿಸಿದೆ.
ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್ ಮಿಯಾನ್ವಾಲಿಯಿಂದ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಇಮ್ರಾನ್ ಖಾನ್ ಅವರು ಮುಂದಿನ ಐದು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸಿದಂತೆ ನಿರ್ಬಂಧ ಹೇರಿ ಪಾಕಿಸ್ತಾನ ಚುನಾವಣಾ ಆಯೋಗ ಕಳೆದ ಆಗಸ್ಟ್ನಲ್ಲಿ ಆದೇಶಿಸಿತ್ತು.
ಆದರೂ ಇಮ್ರಾನ್ ಖಾನ್ ಪಿಟಿಐ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅವರ ಧ್ವನಿಯನ್ನು ರೆಕಾರ್ಡ್ ಮಾಡಿ ಬಿತ್ತರಿಸುವ ಮೂಲಕ ಹಲವೆಡೆ ಚುನಾವಣೆ ಪ್ರಚಾರವನ್ನು ಪ್ರಾರಂಭಿಸಲಾಗಿತ್ತು.




