
INTERNATIONAL
326 ರನ್ಗಳಿಗೆ ಶ್ರೀಲಂಕಾ ಆಲೌಟ್; 102 ರನ್ಗಳ ಬೃಹತ್ ಅಂತರದಿಂದ ಗೆದ್ದ ದಕ್ಷಿಣ ಆಫ್ರಿಕಾ
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 4ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ. ಈ ಪಂದ್ಯದ ಹೈಲೈಟ್ಸ್ ಇಲ್ಲಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅಬ್ಬರಿಸಿದ ಟೆಂಬಾ ಬವುಮಾ ಪಡೆ 102 ರನ್ಗಳ ಅಂತರದಿಂದ ಜಯಭೇರಿ ಬಾರಿಸಿ ವಿಶ್ವಕಪ್ನಲ್ಲಿ ಶುಭಾರಂಭ ಮಾಡಿದೆ.
ದಕ್ಷಿಣ ಆಫ್ರಿಕಾಗೆ ಭರ್ಜರಿ ಗೆಲುವು ಒಲಿದಿದೆ. 326 ರನ್ ಗಳಿಸಿ ಶ್ರೀಲಂಕಾ ಆಲೌಟ್ ಆಗಿದೆ. ಹೀಗಾಗಿ ದಕ್ಷಿಣ ಆಫ್ರಿಕಾ 102 ರನ್ಗಳ ಅಂತರದಿಂದ ಗೆದ್ದು ಬೀಗಿದೆ.




