ಬಿಜೆಪಿಯವರು ಸತ್ಯ ಹರಿಶ್ಚಂದ್ರರ ಮಕ್ಕಳಾ, ಖರ್ಗೆ ಪ್ರಶ್ನೆ

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಚುನಾವಣಾ ಪ್ರಚಾರಕ್ಕೆ ಹೋದ ಕಡೆಯೆಲ್ಲೆಲ್ಲ ಭ್ರಷ್ಟ ಸರ್ಕಾರಗಳಿವೆ ಎಂದು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರ ಮಕ್ಕಳೇ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಲ್ಲಿ ಬಾಬು ಜಗಜೀವನರಾಮ್ ಅವರ 114ನೇ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟರೆಲ್ಲ ಬಿಜೆಪಿಯಲ್ಲಿಯೇ ತುಂಬಿದ್ದಾರೆ. ಆದರೂ ಪ್ರಧಾನಿ ನರೇಂದ್ರಮೋದಿ, ಗೃಹಸಚಿವ ಅಮಿತ್ ಷಾ ಮತ್ತಿತರರು ಹೋದ ಕಡೆಯಲ್ಲೆಲ್ಲ ಬೇರೆ ಪಕ್ಷದ ಸರ್ಕಾರಗಳನ್ನು ಟೀಕೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿಯವರು ದೇಶವನ್ನು ಛಿದ್ರ ಮಾಡುತ್ತಿದ್ದಾರೆ. ಒಡೆದಾಳುವ ನೀತಿಯ ಮೂಲಕವೇ ಬಹಳಷ್ಟು ದಿನ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿದ್ದಾರೆ. ಜನ ಬಹಳ ದಿನ ಸಹಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರಮೋದಿ ಅವರು ಬಾಂಗ್ಲಾ ದೇಶಕ್ಕೆ ಹೋಗಿ ತಾವು ಬಾಂಗ್ಲಾ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿದ್ದಾಗಿ ಹೇಳಿಕೊಂಡಿದ್ದಾರೆ. ಬಾಂಗ್ಲಾ ಹೋರಾಟದಲ್ಲಿ ಮೋದಿ ಪಾಲ್ಗೊಂಡೇ ಇರಲಿಲ್ಲ. ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲೂ ಭಾಗವಹಿಸಿದ್ದೆ ಎಂದು ಮೋದಿ ಹೇಳಬೇಕಿತ್ತು. ಪುಣ್ಯಕ್ಕೆ ಹಾಗೆ ಹೇಳಿಲ್ಲ ಎಂದು ಲೇವಡಿ ಮಾಡಿದರು.
ಅಭಿವೃದ್ದಿಯ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ. ಹೋದ ಕಡೆಯಲೆಲ್ಲ ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುವಂತೆ ಮಾಡುತ್ತಿದ್ದಾರೆ. ಧರ್ಮ ಮುಂದಿಟ್ಟುಕೊAಡು ರಾಜಕೀಯ ನಡೆಸುತ್ತಿದ್ದಾರೆ ಖರ್ಗೆ ಆರೋಪಿಸಿದರು.
ಬಸವಕಲ್ಯಾಣ ಉಪಚುನಾವಣೆ ಹಾಗೂ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಆರ್‌ಎಸ್‌ಎಸ್ ಸಿದ್ದಾಂತಗಳನ್ನು ಆಧರಿಸಿ ಚುನಾವಣೆ ನಡೆಸಲಾಗುತ್ತಿದೆ.
ಆರ್‌ಎಸ್‌ಎಸ್ ಸಿದ್ದಾಂತವೆAದರೆ ವಿಷ ಇದ್ದಂತೆ. ಅದರ ರುಚಿ ನೋಡಲು ಸಾಧ್ಯವಿಲ್ಲ. ಒಂದು ತೊಟ್ಟು ಕುಡಿದರೂ ಕೂಡ ಸಾವು ಖಚಿತ ಎಂದು ಖರ್ಗೆ ಎಚ್ಚರಿಸಿದರು.
ಬಿಜೆಪಿಯಲ್ಲಿ 75 ವರ್ಷ ದಾಟಿದ್ದಾರೆ ಎಂಬ ಕಾರಣಕ್ಕೆ ಅಡ್ವಾಣಿ, ಮುರಳಿಮನೋಹರ್ ಜೋಷಿ ಅವರನ್ನು ಮೂಲೆಗೆ ಕೂರಿಸಿದ್ದಾರೆ. ಕೇರಳದಲ್ಲಿ 85 ವರ್ಷ ದಾಟಿರುವ ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಖರ್ಗೆ ಟೀಕಿಸಿದರು.
ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ತುಳಿತಕ್ಕೊಳಗಾದ ಸಮುದಾಯವನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಪರಿಶಿಷ್ಟರು ಕಾಂಗ್ರೆಸ್‌ನಿAದ ದೂರ ಸರಿಯುತ್ತಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಈ ಬಗ್ಗೆ ಗಮನಹರಿಸಬೇಕೆಂದು ತಿಳಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಹಿರಿಯ ನಾಯಕ ಹನುಮಂತಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Latest Indian news

Popular Stories