ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ಕಲಬುರಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಬೆಂಗಳುರು ಕ್ರಾಸ್ ಬಳಿ ನಡೆದಿದೆ.

ಕಿಣ್ಣಿ ಸಡಕ್ ಗ್ರಾಮದಿಂದ ಕಮಲಾಪುರಕ್ಕೆ ಬೈಕ್ ನಲ್ಲಿ ಯುವಕರು ತೆರಳುತ್ತಿದ್ದರು.

ಕಲಬುರ್ಗಿಯಿಂದ ಹುಮನಾದಾಬ್ ಕಡೆಗೆ ತೆರಳುತ್ತಿದ್ದ ಬಸ್ ಸರ್ಕಾರಿ ಬಸ್ ಗೆ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಕಮಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Latest Indian news

Popular Stories