ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ : ವಿವಾದಾತ್ಮಕ ಹೇಳಿಕೆ ನೀಡಿದ್ದ`ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ’ ವಿರುದ್ಧ `FIR’ ದಾಖಲು!

ಕಲಬುರಗಿ : ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ ಐಆರ್ ದಾಖಲಾಗಿದೆ.

ವಕ್ಫ್ ನೋಟಿಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದ್ದ ‘ವಕ್ಫ್ ಹಠಾವೋ, ದೇಶ ಬಚಾವೋ’ ಪ್ರತಿಭಟನೆಯ ವೇಳೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ‘ಮಕ್ಕಳ ಕೈಗೆ ಪೆನ್ನು ಬದಲಾಗಿ ತಲ್ವಾರ್ ಕೊಡಿ’.ವಕ್ಫ್ ತೆಗೆಯದಿದ್ದರೆ ಜೀವ ತೆಗೆಯೋಕೆ ನಾವು ರೆಡಿ. ಜೀವ ಕೊಡುವುದಕ್ಕೂ, ಜೀವ ತೆಗೆಯುವುದಕ್ಕೂ ಸಿದ್ಧರಿದ್ದೀವಿ ಹುಷಾರ್, ಯುವಕರ ಮನೆಯಲ್ಲಿ ತಲ್ವಾರ್ ಇವೆ. ಎಲ್ಲರ ಮನೆಯಲ್ಲಿ ಎಲ್ಲ ಇದೆ. ಯಾರ್ ಬರುತ್ತಾರೆ ಅವರನ್ನು ತಲ್ವಾರ್‌ನಿಂದ ಕಡಿಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಪ್ರತಿಭಟನಾ ಧರಣಿಯಲ್ಲಿ ಸ್ವಾಮೀಜಿ ನೀಡಿರುವ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Latest Indian news

Popular Stories