ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

ಕಲಬುರಗಿ, ಮೇ 22: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಆಪ್ತರು ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ಅವರು (81) ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ. ಧರ್ಮ ಸಿಂಗ್ ಪರಮಾಪ್ತರಲ್ಲಿ ಒಬ್ಬರಾಗಿದ್ದರು. ಕಲಬುರಗಿ ನಗರದಲ್ಲಿ 1944 ಜೂನ್ 5ರಂದು ಜನಿಸಿದ ಸರಡಗಿ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಬಿಎ, ಎಲ್‌ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್​ ಅಹ್ಮದ್ ಸರಡಗಿ ಅವರು ಪತ್ನಿ, ಪುತ್ರ ಇರ್ಫಾನ್ ಅಹ್ಮದ್ ಸರಡಗಿ, ಪುತ್ರಿ ಡಾ. ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ. ಸಂಜೆ 6 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ನಮ್ಮ ಪಕ್ಷದ ಹಿರಿಯ ನಾಯಕರಾದ ಇಕ್ಬಾಲ್ ಅಹ್ಮದ್ ಸರಡಗಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರಾಗಿದ್ದ ಸರಡಗಿ ಅವರು ಲೋಕಸಭಾ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Latest Indian news

Popular Stories