
Kalaburagi
KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ
ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ.
ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ಡಿಪೋಗೆ ಸೇರಿದ್ದ ಬಸ್ ಕಲಬುರ್ಗಿಯಿಂದ ಯಾದಗಿರಿಗೆ ತೆರಳುತ್ತಿತ್ತು.ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ.




