ಅಂಬೇಡ್ಕರ್ ಪುತ್ಥಳಿಗೆ ಅವಮಾನ: ನಗರದಲ್ಲಿ ರಸ್ತೆ ತಡೆದು ಪ್ರತಿಭಟನೆ

ಕಲಬುರಗಿಯ ಕೋಟನೂರ (ಡಿ) ಗ್ರಾಮದಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ವಿವಿಧ ದಲಿತ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆದು ಪ್ರತಿಭಟಿನೆ ನಡೆಸಿದ್ದರು,
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೇರಿದ ಪ್ರತಿಭಟನಾಕಾರರು ಟೈರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

IMG 20240124 WA0092 Kalaburagi

ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದು ಯಾರು ಸಹಿಸುವಂತಿಲ್ಲ. ಈ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಆಸ್ತಿ ಮುಟ್ಟುಗೋಲು ಹಾಕಿ ಗಲ್ಲು ಶಿಕ್ಷೆಗೆ ಒಳಪಡಿಸಬೇಕು. ಮುಂದೆ ಇಂಥ ಘಟನೆಗಳು ಮರುಕಳಿಸದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಒತ್ತಾಯಿಸಿದರು.ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.

Latest Indian news

Popular Stories