ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ʻಇ-ಮೇಲ್‌ʼ

ಕಲಬುರಗಿ : ಕಲಬುರಗಿ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬಾಂಬ್‌ ಬೆದರಿಕೆ ಇ-ಮೇಲ್‌ ಬಂದಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಡಲಾಗಿದ್ದು, ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಅನಾಮಧೇಯ ವ್ಯಕ್ತಿಯೊಬ್ಬ ಇ-ಮೇಲ್‌ ಕಳುಹಿಸಿದ್ದು ವಿಮಾನ ನಿಲ್ದಾಣದ ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಏರ್‌ ಪೋರ್ಟ್‌ ಗೆ ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories