ಮತ್ಸ್ಯಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ):2021-22ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
*ಪ್ರಮುಖ ಯೋಜನೆಗಳು: 2021-22ನೇ ಸಾಲಿನಲ್ಲಿ ಸದರಿ ಯೋಜನೆಯಡಿ ಒಳನಾಡು ಮೀನುಗಾರಿಕೆ ಸಂಬಂಧಿಸಿದಂತೆ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋಫ್ಲಾಕ್ ಕೊಳಗಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಅಲಂಕಾರಿಕ ಮೀನು ಉತ್ಪಾದಕ ಘಟಕ, ಕ್ರೀಡಾ ಮೀನುಗಾರಿಕೆ, ಆರೆಎಸ್ ಘಟಕ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ/ಶೈತ್ಯಾಗಾರ/ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಸಹಾಯಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಜು.5ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.
2021-22ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ/ರಾಜ್ಯ ವಲಯ/ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟಗಳ ಖರೀದಿ, ಮೀನುಮರಿ ಖರೀದಿ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.ಸಂ:9901244116, ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.ಸಂ:9449593156, ಹೊಸಪೇಟೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.ಸಂ:9449737905, ಹರಪನಹಳ್ಳಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊ.ಸಂ:9632338221 ಗೆ ಸಂಪರ್ಕಿಸಬಹುದು.

Latest Indian news

Popular Stories

error: Content is protected !!