ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರ ಬಂದು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೈಯದ್ ಚಾಂದ ಪಾಶಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಾಗೂ ವಿವಿಧ ರೀತಿಯಲ್ಲಿ ಬೆಂಬಲ ನೀಡಲು ಮುಂದೆ ಬರುವ ವ್ಯಕ್ತಿಗಳನ್ನು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರೆಂದು ಗುರುತಿಸಿ ಅವರಿಗೆ ಯಶಸ್ವಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಸೂಕ್ತ ತರಬೇತಿ ನೀಡಲಾಗುವುದು.
ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವವರಿಗೆ ಇಲಾಖೆಯಿಂದ ಯಾವುದೇ ಗೌರವಧನ/ಶುಲ್ಕವನ್ನು ಪಾವತಿಸಲಾಗುವುದಿಲ್ಲ. ಇದೊಂದು ಸಾಮಾಜಿಕ ಜವಾಬ್ದಾರಿಯಾಗಿದ್ದು, ಸರ್ಕಾರದ ಬಾಲಹಿತೈಷಿ ಯೋಜನೆಯಡಿ ಆಸಕ್ತರು ಮಾರ್ಗದರ್ಶಕರಾಗಿ ಸೇವೆಯನ್ನು ಸಲ್ಲಿಸಲು ಜಾಲತಾಣ ತಿತಿತಿ.iಛಿಠಿs.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಜೂ.26ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಂತಿಧಾಮ ಆವರಣ ಕಂಟೋನ್ಮೆಂಟ್ ಬಳ್ಳಾರಿ ಇವರಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.7090376455 ಅಥವಾ 9449204073 ಗೆ ಸಂಪರ್ಕಿಸಬಹುದು.

Latest Indian news

Popular Stories

error: Content is protected !!