ಧಾರವಾಡ ಕಟ್ಟಡ ಕುಸಿತ ಪ್ರಕರಣ: ರಕ್ಷಣಾ ಕಾರ್ಯಾಚರಣೆ ಎಸ್.ನವೀನ್‍ಗೆ ಮುಖ್ಯಮಂತ್ರಿಯವರ ಚಿನ್ನದ ಪದಕ

ಬಳ್ಳಾರಿ,ಜು.13(ಕರ್ನಾಟಕ ವಾರ್ತೆ): ಧಾರವಾಡದಲ್ಲಿ 2019 ರಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯಪ್ರಜ್ಞೆ ಮೆರೆದ ಬೆಂಗಳೂರು ಹೆಬ್ಬಾಳದ ಅಗ್ನಿಶಾಮಕ ಚಾಲಕ ಎಸ್.ನವೀನ್ ಅವರು ಇಂದು ಮುಖ್ಯಮಂತ್ರಿಯವರ ಪದಕ ಪುರಸ್ಕøತರಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ಜರುಗಿದ ಸಮಾರಂಭದಲ್ಲಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ” ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿನ್ನದ ಪದಕ ಪ್ರದಾನ ಮಾಡಿದರು.
ಎಸ್.ನವೀನ ಅವರು ಕಳೆದ ಸುಮಾರು 14 ವರ್ಷಗಳಿಂದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಚಾಲಕ ವೃತ್ತಿಯ ಜೊತೆಯಲ್ಲಿಯೇ ಅಧಿಕಾರಿಗಳೊಂದಿಗೆ ಹಾಗೂ ತಾಂತ್ರಿಕ ಸಿಬ್ಬಂದಿಯೊಂದಿಗೆ ಅಗ್ನಿ ಅವಘಡ ಮತ್ತು ತುರ್ತು ಸೇವೆಯ ಸಂದರ್ಭದಲ್ಲಿ ಸಹಾಯ ಮಾಡುತ್ತ ಬಂದಿದ್ದಾರೆ. 2019 ರಲ್ಲಿ ಧಾರವಾಡದಲ್ಲಿ ನಡೆದ ಕಟ್ಟಡ ಕುಸಿತ ಘಟನೆಯಲ್ಲಿ ಹಲವಾರು ಜೀವಗಳನ್ನು ರಕ್ಷಿಸಿದ ಕೀರ್ತಿಯು ಇವರದಾಗಿರುತ್ತದೆ.

Latest Indian news

Popular Stories