ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.18(ಕರ್ನಾಟಕ ವಾರ್ತೆ): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಸುತ್ತೋಲೆಯನ್ವಯ ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆ ಅಡಿ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ & ಶೂಟಿಂಗ್) ಎಂದು ಘೋಷಿಸಿಲಾಗಿದೆ.
ಈ ಕೇಂದ್ರಕ್ಕೆ ಖೇಲೋ ಇಂಡಿಯಾ ನಿಯಮಾನುಗಳನುಸಾರ ಗುತ್ತಿಗೆ ಆಧಾರದ ಮೇಲೆ High Performance Manager, Head coach (Swimming, Athletics & Shooting) Young Professional ಹುದ್ದೆಗಳನ್ನು ನೇಮಿಸಕೊಳ್ಳಲು ಅರ್ಹ ಅಭ್ಯರ್ಥಿಗಿಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಬೆಂಗಳೂರಿನ ವಿದ್ಯಾನಗರದ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ & ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಲಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜು.01 ಅಂತಿಮ ದಿನಾಂಕವಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬಳ್ಳಾರಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ನಿಗಧಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಸಂಬಂಧಿಸಿದ ದಾಖಲೆಗಳನ್ನು ನೋಟರಿ ಮಾಡಿಸಿ ಇದೇ ಕಚೇರಿಯಲ್ಲಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್ ಅವರ ಮೊ.ಸಂ:7899935141 ಗೆ ಸಂಪರ್ಕಿಸಬಹದು.

Latest Indian news

Popular Stories

error: Content is protected !!