ಕಾನೂನು ಪದವೀಧರರ ತರಬೇತಿ: ಅರ್ಜಿ ಆಹ್ವಾನ

ಬಳ್ಳಾರಿ, ಜೂ.15 (ಕರ್ನಾಟಕ ವಾರ್ತೆ):2021-22ನೇ ಸಾಲಿನ ಬಳ್ಳಾರಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2 ವರ್ಷದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು(ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು www.sw.kar.nic.in ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿಯೊಂದಿಗೆ ಲಗತ್ತಿಸಲಾದ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ದ್ವಿ ಪ್ರತಿಯಲ್ಲಿ ಆ.14 ರ ಸಂಜೆ:5.30 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಕಚೇರಿಯ ದೂ.ಸಂ: 08392-244738 ಅಥವಾ ಮೊ.ಸಂ:9480843073 ಗೆ ಸಂಪರ್ಕಿಸಬಹುದು.

Latest Indian news

Popular Stories

error: Content is protected !!