ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ:ಅರ್ಜಿ ಆಹ್ವಾನ

ಬಳ್ಳಾರಿ,ಜು.08(ಕರ್ನಾಟಕ ವಾರ್ತೆ):ಎನ್‍ಎಂಡಿಸಿಯ ಸಿಎಸ್‍ಆರ್ ಯೋಜನೆಯಡಿಯಲ್ಲಿ ಸಂಡೂರು ತಾಲೂಕಿನ ತೀವ್ರತರ ಚಲನಾ ದೋಷವುಳ್ಳ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ವಿಕಲಚೇತನರು ಸಂಡೂರು ತಾಲೂಕಿನ ತಾಪಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂರವರ ಮೊ.ಸಂ: 9632052270 ಗೆ ಸಂಪರ್ಕಿಸಿ ಅರ್ಜಿ ಪಡೆದು ಜು.23 ರೊಳಗಾಗಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವವರು ಶೇ.75 ಕ್ಕಿಂತ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರತಕ್ಕದ್ದು. ಎರಡು ಕಾಲು/ಒಂದು ಕಾಲು ಸ್ವಾಧೀನ ಕಳೆದುಕೊಂಡು ದೈಹಿಕವಾಗಿ ಸದೃಡರಾಗಿರಬೇಕು. ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು. ಕಳೆದ 10 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರಬೇಕು. 20ರಿಂದ 60 ವರ್ಷದೊಳಗಿರಬೇಕು. ಪ್ರಾದೇಶಿಕ ಆಯುಕ್ತರಿಂದ ವಾಹನ ಚಾಲನೆಯ ಪರವಾನಿಗೆ ಪಡೆದಿರಬೇಕು. ನಿಗದಿತ ಸಮಯದ ನಂತರ ಬಂದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ:08392-267886 ಗೆ ಸಂಪರ

Latest Indian news

Popular Stories

error: Content is protected !!