ಎರಡು ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ ಜೂ.7ರವರೆಗೆ ಲಾಕ್‍ಡೌನ್ ಮುಂದುವರಿಕೆ:ಡಿಸಿ ಮಾಲಪಾಟಿ lockdown News

ಬಳ್ಳಾರಿ,ಮೇ29(ಕರ್ನಾಟಕ ವಾರ್ತೆ):ಸಾರ್ವಜನಿಕರ ಹಿತದೃಷ್ಠಿಯಿಂದ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈಗಾಗಲೇ ವಿಧಿಸಲಾಗಿರುವ ಸಂಪೂರ್ಣ ಲಾಕ್‍ಡೌನ್ ಆದೇಶವನ್ನು ಮೇ 31ರ ಬೆಳಗ್ಗೆ 6ರಿಂದ ಜೂ.7ರ ಬೆಳಗ್ಗೆ 6ರವರೆಗೆ ಲಾಕ್‍ಡೌನ್ ಮುಂದುವರೆಸಲು ಬಳ್ಳಾರಿ ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಈ ಕುರಿತು ಶನಿವಾರ ಆದೇಶ ಹೊರಡಿಸಿದ್ದಾರೆ. ಮೇ 31 ಮತ್ತು ಜೂ.1 ರಂದು ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ.
ಈಗಾಗಲೇ ಮೇ 22ರಂದು ಉಭಯ ಜಿಲ್ಲೆಗಳಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕೆಲವು ಚಟುವಟಿಕೆಗಳಿಗೆ ನಿಷೇಧ ವಿಧಿಸಲಾಗಿತ್ತು;ಅವುಗಳಿಗೆ ಜೂ.7ರವರೆಗೆ ನಿಷೇಧ ಮುಂದುವರಿಯಲಿದೆ ಎಂದು ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಮಾಲಪಾಟಿ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Latest Indian news

Popular Stories

error: Content is protected !!