ಎಸ್ಸೆಸ್ಸೆಲ್ಸಿ ಪರೀಕ್ಷೆ:ವಿದ್ಯಾರ್ಥಿಗಳಿಗೆ ಪರೀಕ್ಷಾಕೇಂದ್ರಗಳವರೆಗೆ ನಿಗಮದ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಇದೇ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಬಳ್ಳಾರಿ ವಿಭಾಗೀಯ ನಿಯಂತ್ರಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಎಸ್.ಎಸ್.ಎಸ್.ಸಿ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ” ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಬಳ್ಳಾರಿ ವಿಭಾಗದ ಎಲ್ಲಾ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Latest Indian news

Popular Stories