ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಮನವಿ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕಾಗಿದೆ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯವಾಗಿದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,690 ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು ವಿದ್ಯಾರ್ಥಿಗಳಿಗೆ ಹೇಗೆ ತಾನೆ? ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿದೆ ಎಂಬುದನ್ನು ಸರ್ಕಾರ ಮನವರಿಕೆ ಮಾಡಿಕೊಳ್ಳಬೇಕಾಗಿದೆ.

ಅನೇಕ ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇ.55ರಷ್ಟು ಅಂಕಗಳನ್ನು ಪಡೆದಿದ್ದು, ಎನ್ಇಟಿ/ಎಸ್ಎಲ್ಇಟಿ ಅಥವಾ ಪಿ.ಎಚ್ ಡಿ ಪಡೆದುಕೊಂಡಿರುವ ಅತಿಥಿ ಉಪನ್ಯಾಸಕರಿಗೆ ರೂ.13,000/- ಹಾಗೂ ಸ್ನಾತಕೋತ್ತರ/ಎಂ.ಫಿಲ್ ಪದವೀಧರ ಅತಿಥಿ ಉಪನ್ಯಾಸಕರಿಗೆ ರೂ.11,000/- ಗಳ ಮಾಸಿಕ ಗೌರವ ಸಂಭಾವನೆಯನ್ನು ನೀಡಲಾಗುತ್ತಿದೆ, ಈ ಅಲ್ಪವೇತನ ಪಡೆದುಕೊಂಡು ಇಂದಿನ ಹಣದುಬ್ಬರದ ದಿನಮಾನಗಳಲ್ಲಿ ಅತಿಥಿ ಉಪನ್ಯಾಸಕರು ಸಂಸಾರವನ್ನು ನಡೆಸಲು ತೀರಾ ಕಷ್ಟವನ್ನು ಎದುರಿಸುತ್ತಿದ್ದಾರೆ.

ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಜೊತೆಗೆ ಉದ್ಯೋಗ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಉಪನ್ಯಾಸಕರ ಅಳಲಿಗೆ ಸ್ಪಂದಿಸಬೇಕಾಗಿದೆ.

ಅರೆಕಾಲಿಕ ಉಪನ್ಯಾಸಕರಾಗಿ ಅಥವಾ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿರುವವರನ್ನು ಖಾಯಂಗೊಳಿಸಿ ಸೇವಾ ಭದ್ರತೆ ಒದಗಿಸಬೇಕು ಮತ್ತು ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿಗಳ ಸೇವೆಯನ್ನು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಬೇಕು ಅಥವಾ ಸೇವಾ ಸಕ್ರಮಾತಿ ಗೊಳಿಸಬೇಕು ಎಂಬ ನ್ಯಾಯಯುತ ಬೇಡಿಕೆಗಳನ್ನು ಅತಿಥಿ ಉಪನ್ಯಾಸಕರು ಸರ್ಕಾರದ ಮಂದೇ ಇಟ್ಟಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸುತ್ತೇವೆ.

ಸರ್ಕಾರಿ ಕಾಲೇಜುಗಳಲ್ಲಿನ ಕಾರ್ಯಾಭಾರಕ್ಕೆ ಅನುಗುಣವಾಗಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದೇ ಹಿಂದೆಂಟು ಹಾಕುತ್ತಿರುವ ಸರ್ಕಾರ, ಕನಿಷ್ಠ ಪಕ್ಷ ಆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನೆಮ್ಮದಿಯ ಜೀವನ ಕಟ್ಟಿಕೊಳ್ಳುವಷ್ಟಾದರೂ ಆಸರೆಯಾಗಬೇಕಿತ್ತು, ಆದಾವುದು ಆಗದೆ ಇರುವುದರಿಂದ ಉಪನ್ಯಾಸಕರು ಅನಿವಾರ್ಯವಾಗಿ ಪ್ರತಿಭಟನೆಗೆ ಇಳಿದಿದ್ದಾರೆ.

ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಭೋದನಾ ತರಗತಿಗಳನ್ನು ತೊರೆದು ಪ್ರತಿಭಟಿಸುತ್ತಿದ್ದಾರೆ, ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಬಹಳಷ್ಟು ನಷ್ಟವಾಗಲಿದೆ, ಪಾಠ-ಕಲಿಕೆಯು ವಿಳಂಭವಾದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪ್ರಭಾವ ಬೀರುವ ಸಂಭವವಿದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಅಧ್ಯಯನಕ್ಕೆ ಅನಾನುಕೂಲವಾಗಲಿದೆ, ಇದಲ್ಲದೆ ರಾಜ್ಯದ ಅನೇಕ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬನೆಯಾಗಿವೆ, ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸಬೇಕೆಂದು ಎಸ್.ಐ.ಓ. ಮಾನ್ವಿ ತಮ್ಮಲ್ಲಿ ಗೌರವಪೂರ್ವಕವಾಗಿ ಕೇಳಿಕೊಳ್ಳುತ್ತದೆ.

ಈ ಸಂದರ್ಭದಲ್ಲಿ
ಸಮೀರ್ ಪಾಷಾ ಎಸ್.ಐ.ಓ. ಮಾನ್ವಿ ಅಧ್ಯಕ್ಷರು, ಮುಹಮ್ಮದ್ ಯಾಸೀನ್ ಕಾರ್ಯದರ್ಶಿಗಳು, ಮುಹಮ್ಮದ್ ಇಬ್ರಾಹಿಂ,ಜುಬೇರ್ ಖಾನ್, ಮುಹಮ್ಮದ್ ಅಶ್ಫಾಕ್, ಅತೀಕ್,
ಜಿಯಾರುಲ್ ಇಸ್ಲಾಂ,ಅಬ್ದುಲ್ ಅಜೀಜ್, ಜಿಶಾನ್ ಆಖಿಲ್ ಸಿದ್ದಿಖಿ,ಅಬ್ದುಲ್ ಖೈಯುಮ್,
ಜಮಾತೇ ಇಸ್ಲಾಮಿ ಹಿಂದ್ ಮಾನ್ವಿ ಅಧ್ಯಕ್ಷರು ಅಬ್ದುಲ್ ಕರೀಮ್ ಖಾನ್, ಉಪಾಧ್ಯಕ್ಷರು ಅಬ್ದುಲ್ ರಹ್ಮಾನ್, ಸೈಫ್ , ನಾಸಿರ್ ಅಲಿ, ಚಾಂದ್ ಟೈಲರ್, ಚಂದ್ ಪಾಷಾ, ಜಬ್ಬಾರ್ ಖುರೈಶಿ, ಮಹಮ್ಮದ್ ಆರಿಫ್, ಇಮ್ತಿಯಾಜ್ ಹುಸೇನ್, ಇಶ್ರಾದ್ ಖಾನ್, ಮತ್ತು ಇತರೇ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories