ಬೀದರ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್ ಜೂನ್ 27 (ಕರ್ನಾಟಕ ವಾರ್ತೆ): ಬೀದರ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ಅಂಗನವಾಡಿ ಕಾರ್ಯಕರ್ತೆಯರ ಖಾಲಿ ಇರುವ 01 ಹುದ್ದೆಗೆ ಹಾಗೂ ಅಂಗನವಾಡಿ ಸಹಾಯಕಿಯರ 11 ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯರ್ತೆಯರನ್ನು ಸಹಾಯಕಿರನ್ನು ವಿಧವೆಗೆ ಪ್ರಥಮ ಆದ್ಯತೆ ಇದ್ದು ನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗಾಗಿ ಕೇಂದ್ರದ ಗ್ರಾಮ, ಪಟ್ಟಣ ಪಂಚಾಯಿತಿ (ವಾರ್ಡ್) ಹಾಗೂ ನಗರಸಭೆ (ವಾರ್ಡ್) ವ್ಯಾಪ್ತಿಯಲ್ಲಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ, ಸಹಾಯಕಿರ ಹುದ್ದೆಗಾಗಿ ಕನಿಷ್ಠ ನಾಲ್ಕನೆ ತರಗತಿಯಿಂದ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಬೇಕ್ಕಾಗಿದ್ದು ಸುಮಾರು 18 ರಿಂದ 35 ವರ್ಷ ವಯೋಮಿತಿಯಲ್ಲಿರಬೇಕು.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ವೆಬ್‌ಸೈಟ್‌ನಲ್ಲಿ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08482-233115/7353231433 ಸಂರ್ಪಕಿಸಬಹುದಾಗಿದೆ ಎಂದು ಸದಸ್ಯ ಕಾರ್ಯದರ್ಶಿ ತಾಲೂಕಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಆಯ್ಕೆ ಸಮಿತಿ ಹಾಗೂ ಶಿಶು ಅಭಿವೃಧಿ ಯೋಜನಾಧಿಕರಿಗಳಾದ ಮಾಹಾಂತೇಶ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!