ವಿದೇಶಕ್ಕೆ ತೆರಳುವ ಫಲಾನುಭವಿಗಳ ಲಸೀಕಾಕರಣ: ನಿರ್ದೇಶನ ಪಾಲನೆಗೆ ಸೂಚನೆ

ಬೀದರ ಜೂನ್ 17 (ಕರ್ನಾಟಕ ವಾರ್ತೆ): ವಿದೇಶಕ್ಕೆ ತೆರಳುವ ಫಲಾನುಭವಿಗಳ ಲಸಿಕಾಕರಣಕ್ಕೆ ಸಂಬAಧಿಸಿದAತೆ ತಾಲ್ಲೂಕು ಮಟ್ಟದಲ್ಲಿನ ಆಯಾ ತಾಲ್ಲೂಕಿನ ತಹಸೀಲ್ದಾರರಿಗೆ ಸಮರ್ಥ ಅಧಿಕಾರಿಗಳು ಎಂದು ನೇಮಿಸಿ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್. ಅವರು ಆದೇಶಿಸಿರುತ್ತಾರೆ.
ಕೋವಿಶಿಲ್ಡ್ ಲಸಿಕೆಯ ಎರಡು ಡೋಸ್‌ಗಳ ಅಂತರವನ್ನು 12 ರಿಂದ 16 ವಾರಗಳಿಗೆ (84 ದಿನಗಳು) ಪರಿಷ್ಕರಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರದ ನಿರ್ದೇಶನದಂತೆ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ನೌಕರಿಗಾಗಿ ವಿದೇಶಕ್ಕೆ ತೆರಳುವವರು, ಅಂತರಾಷ್ಟ್ರೀಯ ಮಟ್ಟದ ಒಲಂಪಿಕ್ಸಗಾಗಿ ಟೋಕಿಯೋಗೆ ತೆರಳುವ ಆಟಗಾರರಿಗೆ 28 ದಿನಗಳನ್ನು ಪೂರೈಸಿದ ನಂತರ ನೀಡಬೇಕು ಎಂದು ನಿರ್ದೇಶನ ನೀಡಿದಂತೆ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಲಸಿಕಾ ಕೇಂದ್ರಗಳಿಗೆ ಮಾಹಿತಿಯನ್ನು ಪ್ರಚುರಪಡಿಸಲು ಹಾಗೂ ಕಾರ್ಯಾಚರಣೆಗಾಗಿ ಆಯಾ ತಾಲೂಕುಗಳ ತಹಸೀಲ್ದಾರಗಳನ್ನು ಸಮರ್ಥ ಅಧಿಕಾರಿಗಳು ಎಂದು ಜಿಲ್ಲಾಧಿಕಾರಿಗಳು ನೇಮಿಸಿದ್ದಾರೆ.

Latest Indian news

Popular Stories

error: Content is protected !!