ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಗತ್ಯ ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ

ಬೀದರ ಜೂನ್ ೨೮ (ಕರ್ನಾಟಕ ವಾರ್ತೆ):- ಜುಲೈ-೨೦೨೧ರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಸೂಚಿಸಿದರು.
ಮಾನ್ಯ ಶಿಕ್ಷಣ ಸಚಿವರು ಜೂನ್ ೨೮ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ನಡೆಸಿದ ವಿಡಿಯೋ ಸಂವಾದದ ಬಳಿಕ ಜಿಲ್ಲಾಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು.
೨೦೨೦-೨೧ನೇ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯನ್ನು ವಿದ್ಯಾರ್ಥಿಗಳ ಶೈಕ್ಷಣ ಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಸರಳೀಕರಿಸಿ ಪರೀಕ್ಷೆ ನಡೆಸಬೇಕು. ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್-೧೯ ಟೆಕ್ನಿಕಲ್ ಅಡ್ವೆöÊಜರಿ ಕಮೀಟಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅನುಮೋದನೆ ಪಡೆದು ಪ್ರಮಾಣ ತ ಕಾರ್ಯಾಚರಣಾ ವಿಧಾನ ಹೊರಡಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪರೀಕ್ಷೆಯ ಮುನ್ನ ಮತ್ತು ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳು ಮತ್ತು ಪೀಠೋಪಕರಣಗಳನ್ನು ಮತ್ತು ಇನ್ನೀತರ ವಸ್ತುಗಳನ್ನು ಸ್ಯಾನಿಟೈಜ್ ಮಾಡಲು ಅಗತ್ಯ ಕ್ರಮ ವಹಿಸಬೇಕು. ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪರೀಕ್ಷಾ ದಿನದಂದು ಸಕಾಲಕ್ಕೆ ಹಾಜರಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯವರಿಗೆ ಆ ಸಂದರ್ಭಕ್ಕೆ ಅನುಗುಣವಾಗಿ ಕೋವಿಡ್ ೧೯ರ ರ‍್ಯಾಟ್ ಅಥವಾ ಆರ್‌ಟಿಸಿಪಿಆರ್ ಟೆಸ್ಟ್ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಕೇಂದ್ರಗಳ ಪ್ರವೇಶ ದ್ವಾರದಲ್ಲಿ ಚೌಕಗಳನ್ನು ಬರೆಯಬೇಕು. ವಿದ್ಯಾರ್ಥಿಗಳು ಅವುಗಳ ಮೂಲಕವೇ ಆರೋಗ್ಯ ತಪಾಸಣಾ ಕೌಂಟರ್ ಕಡೆಗೆ ತೆರಳಬೇಕು. ಚೌಕಗಳ ನಡುವೆ ಕನಿಷ್ಟ ಆರು ಅಡಿ ಅಂತರವಿರಬೇಕು. ಪ್ರತಿ ಡೆಸ್ಕ್ಗೆ ಒಬ್ಬ ವಿದ್ಯಾರ್ಥಿ ಇರಬೇಕು. ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಒಬ್ಬರು ಅರೇ ವೈದ್ಯಕಿಯ ಅಥವಾ ಆಶಾ ಕಾರ್ಯಕರ್ತೆಯರ ಅಥವಾ ಇತರೆ ಸಿಬ್ಬಂದಿ ಪಡೆಯಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಧರ್ಮಲ್ ಸ್ಕಾö್ಯನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಬೀದರ ಜಿಲ್ಲೆಯಲ್ಲಿ ಜುಲೈ-೨೦೨೧ರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಜಿಲ್ಲೆಯ ೫೩೬ ಶಾಲೆಯ ೨೭,೯೯೯ ಮಕ್ಕಳು ನೋಂದಣ ಮಾಡಿಕೊಂಡಿದ್ದಾರೆ. ಒಟ್ಟು ೫೩೬ ಶಾಲೆಗಳ ಪೈಕಿ ೧೫೩ ಸಾಮಾನ್ಯ ಪರೀಕ್ಷಾ ಕೇಂದ್ರಗಳೆAದು ಮತ್ತು ೧೧ ಸೂಕ್ಷö್ಮ ಪರೀಕ್ಷಾ ಕೇಂದ್ರಗಳೆAದು ಗುರುತಿಸಲಾಗಿದೆ ಎಂದು ಇದೆ ವೇಳೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಂಗಣ್ಣ ಸ್ವಾಮಿ ಅವರು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಜಹೀರಾ ನಸೀಮ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳು ಇದ್ದರು.

Latest Indian news

Popular Stories

error: Content is protected !!