ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೀದರ ಸೆಪ್ಟೆಂಬರ್.17 (ಕರ್ನಾಟಕ ವಾರ್ತೆ):-2021-22ನೇ ಸಾಲಿನ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿಯ ಭೋವಿ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯಕ್ಕೆ ಆನ್‌ಲೈನ್, ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.14 ರವರೆಗೆ ಅವಕಾಶ ಇರುತ್ತದೆ.
ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಮತ್ತು ದಾಖಲೆಗಳನ್ನು ನಿಗಮದ ವೆಬ್‌ಸೈಟ್ https://kbdc.karnataka.gov.in ನಲ್ಲಿ ಅಪ್ಲೋಡ್ ಮಾಡಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!