ಲಾ ಚೇಂಬರ್ಸಗಳ ಉದ್ಘಾಟನಾ ಸಮಾರಂಭ

ಬೀದರ ಜೂನ.23 (ಕರ್ನಾಟಕ ವಾರ್ತೆ): ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಬೀದರನಲ್ಲಿ ನೂತನವಾಗಿ ನಿರ್ಮಿಸಿರುವ ಲಾ ಚೇಂಬರ್ಸಗಳ ಒಂದನೇ ಮತ್ತು ಎರಡನೇ ಮಹಡಿಯ ಉದ್ಘಾಟನಾ ಸಮಾರಂಭವು ಆನ್ ಲೈನ್ ಮೂಲಕ ಜೂನ.24 ರಂದು ಸಾಯಂಕಾಲ 5.30 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ್ ಓಕ್ ಅವರು ಉದ್ಘಾಟಿಸುವರು.
ಕರ್ನಾಟಕ ಉಚ್ಛ ನ್ಯಾಯಾಲಯ ನ್ಯಾಯಮೂರ್ತಿಗಳು ಮತ್ತು ಬೀದರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಗೌರವಾನ್ವಿತ ಎಸ್.ಆರ್.ಕೃಷ್ಣ ಕುಮಾರ್ ಅವರು ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಮಾನ್ಯ ಪಶು ಸಂಗೋಪನಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಕಾಡ್ಲೂರ್ ಸತ್ಯ ನಾರಾಯಣಾಚಾರ್ಯ, ಲೋಕೋಪಯೋಗಿ ಇಲಾಖೆಯ ಎನ್.ಲಿಂಗರಾಜ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಗದೀಶ ಜಗತಾಪ ಹಾಗೂ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ್ ಎಸ್.ಬಿರಾದಾರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!