ಲಾಕ್‌ಡೌನ್:ಅನಾವಶ್ಯಕವಾಗಿ ಸಚಿರಿಸಿದ 142 ವಾಹನ ಜಪ್ತಿ ಮಾಡಿ 1,54,700 ದಂಡ ವಸೂಲಿ

ಬೀದರ ಮೇ 28 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಕೋವಿಡ್-19 ಸೋಂಕು ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಸದರಿ ಸಾಂಕ್ರಾಮಿಕ ರೋಗವನ್ನು ತಡೆಯಲು ರಾಜ್ಯ ಸರ್ಕಾರ ದಿನಾಂಕ 10-05-2021 ರಿಂದ 07-06-2021 ರವರೆಗೆ ಲಾಕಡೌನ್ (ನಿಷೇಧ) ವನ್ನು ಆದೇಶಿಸಿರುತ್ತಾರೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಫೇಸ್ ಮಾಸ್ಕ್ ಹಾಕದವರಿಗೆ ಒಟ್ಟು 1547 ಪ್ರಕರಣಗಳು ಹಾಕಿ 1,54,700 ರೂ. ದಂಡ ವಿಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು, ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕೆಂದು ಆದೇಶವಿದ್ದರು ಸಹ ಜಿಲ್ಲೆಯಲ್ಲಿ ಅನಾವಶ್ಯಕವಾಗಿ ಸಂಚರಿಸಿದವರ 142 ವಾಹನಗಳನ್ನು ಜಪ್ತಿ ಮಾಡಿ ಕಾನೂನು ಪ್ರಕ್ರಿಯೆ ಕೈಕೊಳ್ಳಲಾಗಿದೆ.ಇನ್ನೂ ಮುಂದೆ ಸಾರ್ವಜನಿಕರು ಲಾಕ್‌ಡೌನ್‌ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧಕ ಠಿಣ ಕಾನೂನು ಕ್ರಮಜರುಗಿಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳಾದ ನಾಗೇಶ ಡಿ.ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories

error: Content is protected !!