ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ ,ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ, ಪರಿಶೀಲನೆ

ಬೀದರ ಜುಲೈ 19 (ಕರ್ನಾಟಕ ವಾರ್ತೆ): ರಾಜ್ಯಾದ್ಯಂತ ಆರಂಭಗೊAಡAತೆ ಬೀದರ ಜಿಲ್ಲೆಯಲ್ಲಿ ಕೂಡ 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗಳು ಜುಲೈ 19ರಂದು ಶಾಂತಿಯುತವಾಗಿ ನಡೆದವು.

Student at Exam Center Ramchandra Bidar


ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಜುಲೈ 19ರ ಬೆಳಗ್ಗೆ ಬೀದರ ನಗರದ ಪನ್ನಾಲಾಲ್ ಹೀರಾಲಾಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.
ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮತ್ತು ಇನ್ನೀತರ ಮಾಹಿತಿ ಪಡೆದ ಜಿಲಾಧಿಕಾರಿಗಳು, ಜುಲೈ 22ರಂದು ನಡೆಯುವ ಪರೀಕ್ಷೆಗೆ ಕೂಡ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚನೆ ನೀಡಿದರು.
ಈ ವೇಳೆ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರು ಮತ್ತು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಎಂಜಲೀಕಾ ಅವರು, ಪರೀಕ್ಷೆಗೆ ಹೆಸರು ನೋಂದಾಯಿಸಿಕೊAಡಿದ್ದ 224 ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿ ಮಾತ್ರ ಗೈರಾಗಿದ್ದಾನೆ. ತಮ್ಮ ಶಾಲೆಯ ಆವರಣದಲ್ಲಿ ಚೌಕುಗಳನ್ನು ಹಾಕಿ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿತ್ತು ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ
Image THG MEDIA


ಬೆಳಗ್ಗೆ ತಪಾಸಣೆ: ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲಾಗಿತ್ತು. ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 8.30ರಿಂದಲೇ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಆರಂಭಗೊAಡಿತು.
ಎಲ್ಲಾ ಕೇಂದ್ರಗಳಲ್ಲೂ ತಪಾಸಣೆ: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗೆ ಮತ್ತು ಸ್ಯಾನಿಟೈಜರ್ ವ್ಯವಸ್ಥೆ ಮಾಡಲಾಗಿತ್ತು.
ಒಂದು ಡೆಸ್ಕಿಗೆ ಒಬ್ಬರು: ದೈಹಿಕ ಅಂತರ ಪಾಲನೆಗಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಒಂದು ಡೆಸ್ಕಿಗೆ ಒಬ್ಬ ವಿದ್ಯಾರ್ಥಿ ಇರುವಂತೆ ವ್ಯವಸ್ಥೆ ಮಾಡಲಾಗಿತ್ತು. ಪನ್ನಾಲಾಲ್ ಹೀರಾಲಾಲ್ ಪ್ರೌಢಶಾಲೆಯಲ್ಲಿ ಕೂಡ ಒಂದು ತರಗತಿ ಕೋಣೆಯಲ್ಲಿ 12 ಮಕ್ಕಳಂತೆ ಒಟ್ಟು 19 ತರಗತಿ ಕೋಣೆಗಳಲ್ಲಿ 224 ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ
Image THG MEDIA


ಎರಡನೆ ಪರೀಕ್ಷೆ 22ಕ್ಕೆ: ಎರಡನೇ ಪರೀಕ್ಷೆ ಜುಲೈ 22ರಂದು ನಡೆಯಲಿದ್ದು, ಅಂದು ಪ್ರಥಮ ಭಾಷೆ, ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಪರೀಕ್ಷೆ ನಡೆಯಲಿವೆ. ಅಂದು ಕೂಡ ಪರೀಕ್ಷೆಯು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಪರೀಕ್ಷೆಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ: ಪರೀಕ್ಷಾ ಕೇಂದ್ರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು, ಬೀದರ ಜಿಲ್ಲೆನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಯಾವುದೇ ತೊಂದರೆಯಿಲ್ಲದೇ ಆರಂಭಗೊAಡಿವೆ. ಜುಲೈ 19ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆದವು. ಕೋವಿಡ್ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಹೊಸ ಮಾದರಿಯಲ್ಲಿ ಪರೀಕ್ಷೆಗೆ ಏರ್ಪಾಡು ಮಾಡಿದೆ. ಪ್ರತಿ ವಿಷಯಕ್ಕೆ 40 ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಜುಲೈ 19ರಂದು ಮೂರು ವಿಷಯಗಳ ಮೇಲೆ ಪರೀಕ್ಷೆ ಇತ್ತು. ಹೊಸ ಮಾದರಿಯ ಪರೀಕ್ಷೆಯ ಬಗ್ಗೆ ಈ ಮೊದಲೇ ತಿಳಿಸಿದ್ದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ತಿಳಿವಳಿಕೆ ಇದೆ. ಪರೀಕ್ಷಾ ಕೇಂದ್ರಕ್ಕೆ ತಾವು ಭೇಟಿ ಮಾಡಿ ವೀಕ್ಷಣೆ ನಡೆಸಿದ್ದು, ಎಲ್ಲಾ ಮಕ್ಕಳು ಯಾವುದೇ ಭಯ ಇಲ್ಲದೇ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಿಕ್ಕೆ ಜಿಲ್ಲಾಡಳಿತವು ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಪರೀಕ್ಷೆಯ ಬಗ್ಗೆ ಒತ್ತಡ ಇದ್ದರೆ ಪೋಷಕರು ಅದನ್ನು ಕಡಿಮೆಗೊಳಿಸಿ ಧೈರ್ಯ ತುಂಬಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
91 ವಿದ್ಯಾರ್ಥಿಗಳು ಗೈರು: ಬೀದರ ಜಿಲ್ಲೆಯಲ್ಲಿ ಜುಲೈ 19ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊAಡಿದ್ದ 2734 ವಿದ್ಯಾರ್ಥಿಗಳ ಪೈಕಿ 2643 ಜನರು ಪರೀಕ್ಷೆಗೆ ಹಾಜರಾಗಿದ್ದಾರೆ. 91 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಬ್ಬ ವಿದ್ಯಾರ್ಥಿ ಮಾತ್ರ ಅನಾರೋಗ್ಯ ಕಾರಣ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಂಗಣ್ಣ ಸ್ವಾಮಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗೆ ಸಹಾಯ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ಪನ್ನಾಲಾಲ್ ಹೀರಾಲಾಲ್ ಕಾಲೇಜಿಗೆ ಪರೀಕ್ಷೆ ಬರೆಯಲು ಆಗಮಿಸಿದ ವಿಕಲಚೇತನ ವಿದ್ಯಾರ್ಥಿಯೊಬ್ಬನಿಗೆ ಭಾರತ ಸ್ಕೌಟ್ಸ್ ಅಂಡ್ ಗೈಡ್ಸನ ಶೇಖಸುಮರಾನ್ ಮತ್ತು ಪವನ್ ಅವರು ವೀಲ್ ಚೇರ್ ಮೂಲಕ ಪರೀಕ್ಷಾ ಕೊಠಡಿಗೆ ಕರೆದೊಯ್ದು
ಸಹಾಯ ಮಾಡಿದರು.
ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಪ್ರೌಢಶಾಲೆಯ ಪ್ರಾಂಶುಪಾಲರಾದ ಎಂಜಲೀಕಾ, ಪರೀಕ್ಷಾ ಕೇಂದ್ರಕ್ಕೆ ಎಸ್‌ಓಪಿಯಾಗಿ ನೇಮಕವಾಗಿದ್ದ ಅಮಲಾಪುರ ಸರ್ಕಾರಿ ಉರ್ದು ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಅಶ್ವಿನಿ ಪಾಟೀಲ, ನೌಬಾದ್ ಪ್ರಾಥಮಿಕ ಆರೋಗ್ಯದ ಕೇಂದ್ರದ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ರೈಚಲ್ ರಾಣಿ ಹಾಗೂ ಶಾಲಾ ಸಿಬ್ಬಂದಿ ಇದ್ದರು.

Latest Indian news

Popular Stories

error: Content is protected !!