ಬೀದರನ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

ಬೀದರ ಜೂನ್ ೨೮ (ಕರ್ನಾಟಕ ವಾರ್ತೆ):- ಬೀದರನ ಸರಕಾರಿ ಪಾಲಿಟೆಕ್ನಕ್‌ನಲ್ಲಿ ೨೦೨೦-೨೧ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೇಟ್ ಪಿಸಿಗಳನ್ನು ಶಾಸಕರಾದ ರಹೀಂ ಖಾನ್ ವಿತರಿಸಿದರು.
ಕಾಲೇಜಿನಲ್ಲಿ ಜೂನ್ ೨೮ರಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಕಲಿಕಾ ನಿರ್ವಹಣೆ ವ್ಯವಸ್ಥೆ ಯೋಜನೆಯಡಿ ವಿದ್ಯಾರ್ಥಿಗಳಿಗೆ ಸ್ಯಾಮಸಂಗ್ ಟ್ಯಾಬ್ಲೇಟ್ ಪಿಸಿ ಉಪಕರಣಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ವಿದ್ಯಾರ್ಥಿಗಳು ಅಭ್ಯಾಸಕ್ಕೆ ಹೆಚ್ಚಿನ ಗಮನ ಕೊಡಬೇಕು. ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದಿದೆ ಎನ್ನುವ ಹಣೆಪಟ್ಟಿಯನ್ನು ಕಳಚುವ ನಿಟ್ಟಿನಲ್ಲಿ ಈ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಕಾಲೇಜಿನ ಪ್ರಾಚಾರ್ಯರಾದ ಹೊಸಳ್ಳಿ ಪ್ರಭು ಅವರು ಮಾಡನಾಡಿ, ೬೩೮ ವಿದ್ಯಾರ್ಥಿಗಳಿಗೆ ಟ್ಯಾಬ್ ಮಂಜೂರಾಗಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಕಾಲಕ್ಕೆ ಟ್ಯಾಬ್‌ಗಳು ನೀಡಲಾಗುವುದು. ಈ ಉಪಕರಣವು ಆನ್‌ಲೈನ್ ಭೋದನೆ, ಕಲಿಕೆಗೆ ಉಪಯೋಗವಾಗಿದೆ ಎಂದರು.
ಈ ಟ್ಯಾಬಗಳನ್ನು ಮಕ್ಕಳ ಕೈಗೆ ಕೊಡದೆ ಸುರಕ್ಷಿತವಾಗಿಟ್ಟುಕೊಳ್ಳಬೇಕು. ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಸಂಸ್ಥೆಯ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಹಿತದೃಷ್ಟಿ ಮೇರೆಗೆ ಸರ್ಕಾರದ ಯೋಜನೆಯನ್ನು ಸಾರ್ಥಕಗೊಳಿಸಬೇಕೆಂದು ಕಳಕಳಿಯ ಮನವಿ ಮಾಡಿದರು. ಸಮಾರಂಭದಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಜರಿದ್ದರು.

Latest Indian news

Popular Stories