ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ

ಬೆ0ಗಳೂರು: ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ನೂತನ ನಾಯಕನ ಆಯ್ಕೆಗೆ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಂಜೆ 7 ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಗಣೇಶ ಕಾರ್ಣಿಕ್ ತಿಳಿಸಿದ್ದಾರೆ.
ನೂತನ ಮುಖ್ಯಮಂತ್ರಿ ಆಯ್ಕೆಗೆ ಸಂಬ0ಧಿಸಿ0ದ0ತೆ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬಿಜೆಪಿ ವರಿಷ್ಠರು ಇಬ್ಬರು ವೀಕ್ಷಕರನ್ನು ನೇಮಕ ಮಾಡಿದ್ದಾರೆ. ವೀಕ್ಷಕ ಧರ್ಮೇಂದ್ರ ಪ್ರಧಾನ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಅಭಿಪ್ರಾಯ ಸಂಗ್ರಹಿಸುವರು.
ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೌನ ಮುಂದುವರೆದಿದೆ. ಬಿಎಸ್‌ವೈ ಅವರ ಈ ನಿಲುವನ್ನು ಎಚ್ಚರಿಕೆಯ ಸಂದೇಶರ ರೀತಿಯಲ್ಲಿ ಅರ್ಥೈಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನೂತನ ನಾಯಕನ ಆಯ್ಕೆಗೆ ಬಿಜೆಪಿ ನಾಯಕತ್ವ ಮುಂದಾಗಿದೆ.
ಶಾಸಕಾ0ಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ಶಾಸಕರಿಗೆ ವೀಕ್ಷಕರು ತಿಳಿಸಲಿದ್ದಾರೆ. ಆ ಬಳಿಕ ನೂತನ ಶಾಸಕಾಂಗ ಪಕ್ಷದ ನಾಯಕನ ಹೆಸರನ್ನು ಹಿರಿಯ ಶಾಸಕರು ಅನುಮೋದಿಸಲಿದ್ದಾರೆ

Latest Indian news

Popular Stories

error: Content is protected !!