ಬಿಎಸ್‌ವೈಗೆ ಬಿಜೆಪಿ ಅಧ್ಯಕ್ಷ ನಡ್ಡಾ ಬೆಂಬಲ

ಪಣಜಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.
ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೋವಾದಲ್ಲಿ ನಡ್ಡಾ ಅವರು ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ್ದು, ಕರ್ನಾಟಕದಲ್ಲಿ ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಅವರನ್ನು ಕೆಳಗಿಳಿಸುವ ಮನಸ್ಸಿಲ್ಲ ಎಂದಿದ್ದಾರೆ. ಸದ್ಯ ನಡ್ಡಾ ಅವರು ಗೋವಾದಲ್ಲಿದ್ದು, ಅವರು ದೆಹಲಿಗೆ ಹೋದ ನಂತರ ಏನಾದರೂ ಬೆಳವಣಿಗೆ ನಡೆಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Latest Indian news

Popular Stories

error: Content is protected !!