ಬಿಜೆಪಿಗೆ ಬಿಎಸ್‌ವೈ ಆತ್ಮ, ಸರ್ವ ಸಮ್ಮತ ನಾಯಕ

ಮಂಗಳೂರು: ಬಿಜೆಪಿಗೆ ಯಡಿಯೂರಪ್ಪ ಅವರೇ ಆತ್ಮ, ಸರ್ವ ಸಮ್ಮತ ನಾಯಕ ಎಂದು ರಾಜ್ಯ ಬಿಜೆಪಿ ಅದ್ಯಕ್ಷ ನಳೀನಕುಮಾರ ಕಟೀಲ್ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತ ಅಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ನಳೀನಕುಮಾರ್,
ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರು ಪಕ್ಷದ ಎರಡು ಕಣ್ಣುಗಳು ಇದ್ದಂತೆ ಎಂದು ಬಣ್ಣಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಯಾವುದೇ ನಾಯಕತ್ಲ ಬದಲಾವಣೆಯ ಚರ್ಚೆ ನಡೆದಿಲ್ಲ, ಈಶ್ವರಪ್ಪ- ಜಗದೀಶ್ ಶೆಟ್ಟರ್ ಸೇರಿದಂತೆ ಯಾವ ಸಚಿವರ ಬದಲಾವಣೆ ಬಗ್ಗೆಯೂ ಚರ್ಚಿಸಿಲ್ಲ, ಅವರಿಬ್ಬರು ಪಕ್ಷದ ಎರಡು ಕಣ್ಣುಗಳಿದ್ದಂತೆ ಎಂದು ಹೇಳಿದರು.
ಆಡಿಯೋಗೂ ನನಗೂ ಯಾವುದೇ ಸಂಬAಧವಿಲ್ಲ ಇಲ್ಲ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರೆಯುತ್ತೇನೆ, ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ ಎಂದರು.
ಆಡಿಯೋ ಬಗ್ಗೆ ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದ್ದಕ್ಕೂ ತನಿಖೆಯ ಬಳಿಕ ಉತ್ತರ ನೀಡುತ್ತೇನೆ. ಇವತ್ತು ಅಧಿವೇಶನಕ್ಕೆ ಹೋಗುತ್ತಿದ್ದೇನೆ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ ಎಂದು ನಳಿನ್‌ಕುಮಾರ್ ಕಟೀಲ್ ತಿಳಿಸಿದರು.

Latest Indian news

Popular Stories

error: Content is protected !!