ಟ್ವಿಟರ್ ವಿರುದ್ಧ ಕ್ರಮಕ್ಕೆ ಕೇಂದ್ರ ಸ್ವತಂತ್ರ

ನವದೆಹಲಿ: ಟ್ವಿಟರ್ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಸ್ವತಂತ್ರವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) 2021 ರ ನಿಯಮಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪ ಕುರಿತಂತೆ ಹೈಕೋರ್ಟ್ ಮಂಗಳವಾರ ಟ್ವಿಟರ್ ಇಂಕ್ ಅನ್ನು ತರಾಟೆಗೆ ತೆಗೆದುಕೊಂಡಿದೆ. ಕೇಂದ್ರವು ಯಾವುದೇ ಕ್ರಮ ತೆಗೆದುಕೊಳ್ಳಲು ಮುಕ್ತವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಕುಂದುಕೊರತೆ ನಿವಾರಣಾ ಅಧಿಕಾರಿಯ ನೇಮಕದಲ್ಲಿ ವಿಳಂಬ ಮಾಡಿರುವುದರ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ರೇಖಾ ಪಲ್ಲಿ ಅವರು, `ನಿಮ್ಮ (ಟ್ವಿಟ್ಟರ್) ಪ್ರಕ್ರಿಯೆಯು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ? ಟ್ವಿಟರ್ ನಮ್ಮ ದೇಶದಲ್ಲಿ ಬಯಸಿದಷ್ಟು ಸಮಯ ತೆಗೆದುಕೊಳ್ಳಬಹುದು ಎಂದು ಭಾವಿಸಿದರೆ, ನಾನು ಅದನ್ನು ಅನುಮತಿಸುವುದಿಲ್ಲ’ ಎಂದು ಹೇಳಿದರು.
ಹೊಸ ಐಟಿ ನಿಯಮಗಳ ಪ್ರಕಾರ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಿಸದ ಕಾರಣ ಟ್ವಿಟರ್ ಕಾನೂನನ್ನು ಧಿಕ್ಕರಿಸಿದೆ ಎಂದು ವಿಚಾರಣೆಯ ವೇಳೆ ನ್ಯಾಯಾಲಯ ಟೀಕಿಸಿದೆ.

Latest Indian news

Popular Stories