ಬೆಳ್ತಂಗಡಿ; ಕಾಲೇಜಿನಿಂದ ಡಿಬಾರ್ – ನ್ಯಾಯಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿ ಏಕಾಂಗಿ ಪ್ರತಿಭಟನೆ

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವನ್ನೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆಯೆಂದು ವರದಿಯಾಗಿದೆ. ಬೆಳ್ತಂಗಡಿ ವಾಣಿ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿ ನ್ಯಾಯಕ್ಕಾಗಿ ಏಕಾಂಗಿಯಾಗಿ ಧರಣಿ ನಡೆಸುತ್ತಿದ್ದಾನೆ.

ಕಳೆದ 19 ದಿನಗಳಿಂದ ಸಂಸ್ಥೆಯೊಂದಿಗೆ ಕಾಲೇಜಿಗೆ ಸೇರಿಸುವಂತೆ ವಿನಂತಿ ಮಾಡಿದ್ದರೂ ಮನಿಯದ ಸಂಸ್ಥೆಯು ಕಾಲೇಜಿನಿಂದ ಹೊರಹಾಕಿದೆ ಎಂದು ಆರೋಪಿಸಿದ್ದಾನೆ.

ಇಂದು ನ್ಯಾಯಕ್ಕಾಗಿ ವಿದ್ಯಾರ್ಥಿಯು ಕಾಲೇಜಿನ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾನೆ. ಇದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರೆಸಬೇಕು, ಡಿಬಾರ್ ಹಿಂಪಡೆಯಬೇಕೆಂದು ವಿದ್ಯಾರ್ಥಿ ಆಗ್ರಹಿಸುತ್ತಿದ್ದಾನೆ.

Latest Indian news

Popular Stories

error: Content is protected !!