ಮಂಗಳೂರು: ಯುವತಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಾವೂರಿನ ಆಕಾಶಭವನದಲ್ಲಿ ನಡೆದಿದೆ.

ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ ( 22 ) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.

ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಇಂದು ಸಂಜೆ ಎಂದಿನಂತೆ ಮನೆಗೆ ಆಗಮಿಸಿದ್ದಳು. ಆದರೆ ಮನೆಯಲ್ಲಿ ಕೋಣೆಗೆ ತೆರಳಿ, ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ.

ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories

error: Content is protected !!