ಮುಂಬೈಯದಲ್ಲಿ ಮಹಾ ಮಳೆ, ರೈಲು ಸಂಚಾರ ಅಸ್ತವ್ಯಸ್ತ

ಮುಂಬೈ: ಶುಕ್ರವಾರ ಮುಂಜಾನೆಯಿAದ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ರೈಲು ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಪೂರ್ವ ಮತ್ತು ಪಶ್ಚಿಮ ಉಪ ನಗರಗಳಲ್ಲಿ ಕ್ರಮವಾಗಿ 7.5 ಸೆಂ.ಮೀ ಮತ್ತು 7.3 ಸೆಂ.ಮೀ ಮಳೆಯಾಗಿದೆ. ವಿವಿಧ ರೈಲು ನಿಲ್ದಾಣಗಳಲ್ಲಿನ ಹಳಿಗಳ ಮೇಲೆ ನೀರು ನಿಂತಿರುವುದರಿAದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ನಗರದ ರಸ್ತೆಗಳ ಮೇಲೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸಂಚಾರವೂ ಸ್ಥಗಿತವಾಗಿದೆ. ಮುಂಬೈ ಮತ್ತು ಅದರ ಉಪನಗರಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮುಂಬೈನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಮುಂಬೈನಲ್ಲಿ ಬಸ್, ರೈಲು ಸಂಚಾರ ಸ್ಥಗಿತಗೊಂಡಿದೆ. ಅಂಧೇರಿಯಲ್ಲಿ ಮಹಿಳೆಯೊಬ್ಬಳು ಮ್ಯಾನ್‌ಹೋಲ್‌ನಲ್ಲಿ ಕೊಚ್ಚಿಹೋಗಿರುವ ಘಟನೆಯೂ ನಡೆದಿದೆ.
ಮುಂಬೈ, ಥಾಣೆ, ನವಿ ಮುಂಬೈ, ಪಲ್ಘಾರ್ ಮುಂತಾದ ಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಮಹಾರಾಷ್ಟ್ರದ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯ ಆರ್ಭಟವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬೈ ಸುತ್ತಮುತ್ತಲಿನ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಪರದಾಡುತ್ತಿದ್ದಾರೆ. ಅಂಧೇರಿ, ಚೆಂಬೂರ್, ಸಿಯೋನ್, ಮುಂಬೈನಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಬಸ್ ಸಂಚಾರಕ್ಕೆ ವ್ಯತ್ಯಯವಾಗಿದೆ.
ಮುಂಬೈನ ಮಳೆಯ ಅವಾಂತರಗಳ ವಿಡಿಯೋಗಳು ಕೂಡ ವೈರಲ್ ಆಗುತ್ತಿವೆ. ಮುಂದಿನ 24 ಗಂಟೆಗಳ ಕಾಲ ಮುಂಬೈನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಇನ್ನೂ ಮೂರ್ನಾಲ್ಕು ದಿನ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Latest Indian news

Popular Stories