ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಯೋಜನೆ/ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಶುರು ಮಾಡಲು ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ),ಜೂ.11(ಕರ್ನಾಟಕ ವಾರ್ತೆ): 2021-22ನೇ ಸಾಲಿನ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಶುರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ನಿಯಮಿತದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಗೆ ವಿಶೇಷ ಘಟಕ ಯೋಜನೆ/ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ (6+1) ಜಿಲ್ಲಾವಾರು ಗುರಿ ನಿಗದಿಪಡಿಸಲಾಗಿದ್ದು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೊಂದಣಿಯಾಗಿರುವ ಮತ್ತು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 18ರಿಂದ 60 ವರ್ಷ ಮಹಿಳಾ ಸದಸ್ಯರು/ ಮಹಿಳಾ ಸದಸ್ಯರು ಇಲ್ಲದಿದ್ದಲ್ಲಿ ಪುರುಷ ಸದಸ್ಯರನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದಿರುವ ತಾಲೂಕುಗಳಲ್ಲಿ ಕುರಿ ಸಾಕಾಣಿಕೆಗಾರರನ್ನು ಫಲಾನುಭವಿಗಳನ್ನಾಗಿ ಜಿಲ್ಲಾ ಆಯ್ಕೆ ಸಮಿತಿಯ ಮೂಲಕ ಅಯ್ಕೆ ಮಾಡಲಾಗುತ್ತದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅರ್ಹ ಕುರಿಗಾರರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ಆಯಾ ತಾಲೂಕು ಪಶು ಆಸ್ಪತ್ರೆಗಳಲ್ಲಿ ಜೂ.20ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ದೂ.ಸಂ: 08394-227320 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Latest Indian news

Popular Stories