ಜೂನ್ ಮಾಹೆ: ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ

ಕಲಬುರಗಿ,ಜೂನ್.೦೫.(ಕ.ವಾ.)-ಕೋವಿಡ್-೧೯ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ ೨೦೨೧ರ ಜೂನ್ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ, ಬಿ.ಪಿ.ಎಲ್./ ಆದ್ಯತಾ, ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಹಾಗೂ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಈ ಕೆಳಗಿನಂತೆ ಪಡಿತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೆಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಎವೈ/ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ೩೫ ಕೆ.ಜಿ. ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.
ಬಿಪಿಎಲ್/ ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ ೫ ಕೆ.ಜಿ ಅಕ್ಕಿ ಸೇರಿದಂತೆ ಒಟ್ಟು ೧೦ ಕೆ.ಜಿ ಅಕ್ಕಿಯನ್ನು ಹಾಗೂ ಪ್ರತಿ ಪಡಿತರ ಚೀಟಿಗೆ ೨ ಕೆ.ಜಿ. ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.
ಎಪಿಎಲ್ /ಆದ್ಯತೇತರ (Wiಟಟiಟಿgಟಿess) ಏಕ ಸದಸ್ಯ ಇರುವ ಪಡಿತರ ಚೀಟಿಗೆ ೫ ಕೆ.ಜಿ ಅಕ್ಕಿ ಮತ್ತು ಒಂದಕ್ಕಿAತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ ೧೦ ಕೆ.ಜಿ. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ ೧೫ ರೂ. ರಂತೆ ವಿತರಿಸಲಾಗುತ್ತದೆ.

ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಪ್ರತಿ ಬಿಪಿಎಲ್ (ಆದ್ಯತಾ/ಪಿಹೆಚ್‌ಹೆಚ್) ಕುಟುಂಬ ಪಡಿತರ ಚೀಟಿ ಅರ್ಜಿದಾರರಿಗೆ (ಪ್ರತಿ ಅರ್ಜಿಗೆ) ೧೦ ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಅದರಂತೆ ಆಹಾರಧಾನ್ಯಗಳನ್ನು ಪಡೆಯಲು ಇಚ್ಛಿಸಿರುವ ಎಪಿಎಲ್ (ಆದ್ಯತೇತರ/ ಎನ್‌ಪಿಹೆಚ್‌ಹೆಚ್) ಪಡಿತರ ಚೀಟಿ ಅರ್ಜಿದಾರರಿಗೆ (ಪ್ರತಿ ಅರ್ಜಿಗೆ) ೧೦ ಕೆ.ಜಿ. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ ೧೫ ರೂ. ರಂತೆ ವಿತರಿಸಲಾಗುತ್ತದೆ.
ಅಂತರರಾಜ್ಯ/ ಅಂತರ್‌ಜಿಲ್ಲೆ ಪೋರ್ಟೆಬಿಲಿಟಿ (Poಡಿಣಚಿbiಟiಣಥಿ) ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಖಣ ಅಥವಾ ತಗ್ಗು ಪ್ರದೇಶಗಳಲ್ಲಿ ತ್ಯಾಜ್ಯ ವಿಲೇವಾರಿ: ಜಮೀನು ಮಾಲೀಕರಿಂದ ಅರ್ಜಿ ಆಹ್ವಾನ

Latest Indian news

Popular Stories