ಉಚಿತ ಕುರಿ ಸಾಕಾಣ ಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ:ಅ.೨೩.(ಕ.ವಾ)-ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಕಿಟಸರ್ಡ್)ಯಿಂದ ಇದೇ ಜುಲೈ ೨೬ ರಿಂದ ಆಗಸ್ಟ್ ೪ರ ವರೆಗೆ ಹತ್ತು ದಿನಗಳ ಕಾಲ ಉಚಿತ ಕುರಿ ಸಾಕಾಣ ಕೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಎಸ್.ಬಿ.ಐ. ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ೧೮ ರಿಂದ ೪೫ ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ತರಬೇತಿ ಸಮಯದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗುತ್ತದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ತರಬೇತಿ ಸಂಸ್ಥೆಯಿAದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬಿ.ಪಿ.ಎಲ್ ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಜಿರಾಕ್ಸ್ ಪ್ರತಿ ಹಾಗೂ ಇತ್ತೀಚಿನ ೫ ಇತ್ತೀಚಿನ ಭಾವಚಿತ್ರ ದಾಖಲಾತಿಗಳೊಂದಿಗೆ ೨೦೨೧ ಜುಲೈ ೨೩ ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅದೇ ರೀತಿ ಜುಲೈ ೨೩ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯುವರೆಗೆ ತರಬೇತಿ ಸಂಸ್ಥೆ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗಬೇಕೆಂದು ಕೋರಲಾಗಿದೆ.
ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ ೯೨೪೩೬೦೨೮೮೮, ೯೮೮೬೭೮೧೨೩೯ಗೆ ಸಂಪರ್ಕಿಸಲು ಕೋರಲಾಗಿದೆ.

Latest Indian news

Popular Stories