ನರೇಗಾ: ವಿವಿಧ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ,ಜುಲೈ.೦೮.(ಕ.ವಾ.)-ಕಲಬುರಗಿ ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಮೆ/ ಮನೀಷ ಮ್ಯಾನ್‌ಪವರ್ ಎಜೆನ್ಸಿಯಿಂದ ತಾಲೂಕು ಮಟ್ಟದಲ್ಲಿ ಈ ಕೆಳಕಂಡ ಹುದ್ದೆಗಳಿಗೆ ಸೇವೆ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ತಿಳಿಸಿದ್ದಾರೆ.

ತಾಲೂಕು ಎಮ್‌ಐಎಸ್ ಸಂಯೋಜಕರು ೩ ಹುದ್ದೆಗಳಿಗೆ, ತಾಲೂಕು ಐಇಸಿ ಸಂಯೋಜಕರು ೪ ಹುದ್ದೆಗಳಿಗೆ ಹಾಗೂ ತಾಂತ್ರಿಕ ಸಹಾಯಕರು ೨೫ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕು ಎಮ್‌ಐಎಸ್ ಸಂಯೋಜಕರು ಹಾಗೂ ತಾಲೂಕು ಐಇಸಿ ಸಂಯೋಜಕರು ಹುದ್ದೆಗಳಿಗೆ ಗರಿಷ್ಠ ವಯೋಮಿತಿ ೪೫ ವರ್ಷದೊಳಗಿರಬೇಕು.

ಅರ್ಹ ಅಭ್ಯರ್ಥಿಗಳು https://kalaburagi.nic.in ವೆಬ್‌ಸೈಟ್‌ದಲ್ಲಿ ಆನ್‌ಲೈನ್ ಮೂಲಕ ೨೦೨೧ರ ಜುಲೈ ೧೫ ರೊಳಗಾಗಿ ಅರ್ಜಿ ಸಲಿಸಬೇಕು. ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಮಾಸಿಕ ವೇತನ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.

Latest Indian news

Popular Stories

error: Content is protected !!