ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ತಡೆಯಲು ಮುಂಜಾಗ್ರತಾ ಕ್ರಮ : ಸಚಿವ ಮುರುಗೇಶ್ ನಿರಾಣ

ಕಲಬುರಗಿ, ಜೂನ್ ೨೨(ಕ. ವಾ)- ಸಂಭಾವ್ಯ ಕೋವಿಡ್ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಗಣ ಮತ್ತು ಭೂ ವಿಜ್ಞಾನ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣ ಅವರು ತಿಳಿಸಿದ್ದಾರೆ.

ಮಂಗಳವಾರ ನಗರದ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು. ವಿಶ್ವ ಆರೋಗ್ಯ ಸಂಸ್ಥೆ, ಖ್ಯಾತ ವೈದ್ಯ ದೇವಿಶೆಟ್ಟಿ ಹಾಗೂ ದೇಶದ ಇನ್ನಿತರ ಪ್ರಮುಖ ತಜ್ಞವೈದ್ಯರ ಪ್ರಕಾರ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಶೇಕಡ ೫೦:೫೦ ಎಂದು ಅಭಿಪ್ರಾಯಪಟ್ಟಿರುತ್ತಾರೆ. ಜೊತೆಗೆ ೧೮ ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕದಿದ್ದರೂ, ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ. ರಾಜ್ಯದಲ್ಲಿ ಕೋವಿಡ್‌ನಿಂದ ಮಕ್ಕಳ ಸಾವಿನ ಸಂಖ್ಯೆ ತೀರಾ ವಿರಳ ಎಂದ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು ೨೦೦೮ ಮಕ್ಕಳಲ್ಲಿ ಕೋವಿಡ್ ಸೋಂಕು ಕಾಣ ಸಿಕೊಂಡಿದ್ದರೂ, ಯಾವುದೇ ಸಾವು ಸಂಭವಿಸಿಲ್ಲ ಎಂದು ಉದಾಹರಣೆ ನೀಡಿದರು.

ಆದರೂ, ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೆಡ್, ಐಸಿಯು, ವೆಂಟಿಲೇಟರ್ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಜಿಲ್ಲಾ ಖನಿಜ ನಿಧಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ಬೇಕಾಗುವ ಅಕ್ಸಿಜನ್ ಸಿಲಿಂಡರ್ ಮುಂತಾದ ವೈದ್ಯಕೀಯ ಉಪಕರಣಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೊರತೆ ಇರುವ ವೈದ್ಯರ ನೇಮಕಕ್ಕೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದ್ದು, ೧,೭೦೦ ವೈದ್ಯರ ನೇಮಕಾತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಪೈಕಿ ೨೭ ಜನ ವೈದ್ಯರು ಕಲಬುರಗಿ ಜಿಲ್ಲೆಗೆ ಸೇರ್ಪಡೆಯಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ಶಹಾಬಾದ್ ಇಎಸ್‌ಐ ಆಸ್ಪತ್ರೆ ಕಳೆದ ೧೬ ವರ್ಷಗಳಿಂದ ಮುಚ್ಚಲಾಗಿತ್ತು. ಕಳೆದ ೨೦ ದಿನಗಳಿಂದಲೂ ನವೀಕರಣ ಕಾಮಗಾರಿ ನಡೆದಿದ್ದು, ಇನ್ನು ೧೫ ದಿನಗಳಲ್ಲಿ ಸೇವೆಗೆ ಸಜ್ಜುಗೊಳಿಸಲಾಗುತ್ತಿದೆ. ೧೦ ರಿಂದ೧೨ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದ್ದು, ಜಿಲ್ಲಾ ಖನಿಜ ನಿಧಿಯಿಂದ ಅಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಸಾಮಾಗ್ರಿಗಳನ್ನು ಖರೀದಿಸಲಾಗುವುದು ಎಂದು ಅವರು ತಿಳಿಸಿದರು. ಮೂಲತ: ಆಸ್ಪತ್ರೆ ಕಟ್ಟಡ ಇಎಸ್‌ಐಗೆ ಸೇರಿದ್ದು, ನಿರ್ವಹಣೆಯನ್ನು ಇಎಸ್‌ಐಗೆ ವಹಿಸಲಾಗುವುದು. ಒಂದುವೇಳೆ ಇಎಸ್‌ಐ ನವÀರು ನಿರ್ವಹಿಸದಿದ್ದರೆ, ರಾಜ್ಯ ಸರ್ಕಾರವೇ ನಿರ್ವಹಣೆ ಮಾಡಲಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳಿAದ ಉದ್ಘಾಟನೆ: ಶಹಾಬಾದ್ ಇಎಸ್‌ಐ ಆಸ್ಪತ್ರೆಯ ನವೀಕರಣ ಮುಗಿದ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಉದ್ಘಾಟನೆ ನೆರವೇರಿಸಲು ಯೋಜಿಸಲಾಗಿದೆ. ಕಲಬುರಗಿ ಜಿಮ್ಸ್ ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಮತ್ತು ಶಹಾಬಾದ್ ಇಎಸ್‌ಐ ಆಸ್ಪತ್ರೆಗಳನ್ನು ಬರುವ ಜುಲೈನಲ್ಲಿ ಮುಖ್ಯಮಂತ್ರಿಗಳಿAದ ಉದ್ಘಾಟನೆ ಮಾಡಿಸುವ ಕುರಿತು ಶಾಸಕರು ಮತ್ತು ಸಂಸದರೊAದಿಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಡಿಎಪಿ ಬಿಟ್ಟರೆ ಉಳಿದ ರಸಗೊಬ್ಬರಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಸಂಬAಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ.ಸದಾನಂದಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಜೊತೆ ಚರ್ಚಿಸಲಾಗಿದ್ದು, ಯಾವುದೇ ಸಮಸ್ಯೆ ಉದ್ಭವಿಸದು ಎಂದು ಅವರು ಹೇಳಿದರು.

ಮಹಾರಾಷ್ಟç ಮತ್ತು ಬೆಳಗಾವಿಯಲ್ಲಿ ಸುರಿದ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿದಿದ್ದರಿಂದ ಆತಂಕ ಉಂಟಾಗಿತ್ತು. ಇದೀಗ ಮೂರು ದಿನಗಳಿಂದ ಮಳೆ ನಿಂತಿರುವುದರಿAದ ಆತಂಕ ದೂರವಾಗಿದೆ ಎಂದರು.

ಕಲಬುರಗಿ ವಿಷನ್-೨೦೫೦ ಕುರಿತಂತೆ ಡಾ. ನಂಜುAಡಪ್ಪ ವರದಿ, ಕೆಕೆಆರ್‌ಡಿಬಿ ವರದಿ ಇನ್ನಿತರವುಗಳನ್ನು ಅಧ್ಯಯನ ಮಾಡಲಾಗುವುದು ಎಂದ ಅವರು ವಿವಿಧ ಸಮಿತಿಗಳಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುತ್ತಿದ್ದು, ಇನ್ನು ಅಂತಿಮ ಗೊಳಿಸಿಲ್ಲ. ಜುಲೈನಲ್ಲಿ ರಾಷ್ಟç ಮತ್ತು ರಾಜ್ಯಮಟ್ಟದ ಪರಿಣ ತರು, ನಿವೃತ್ತ ಹಿರಿಯ ಅಧಿಕಾರಿಗಳು, ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವರು, ಹಿರಿಯ ಪತ್ರಕರ್ತರು ಇನ್ನಿತರರನ್ನು ಆಹ್ವಾನಿಸಿ ಜುಲೈನಲ್ಲಿ ಸಭೆ ಸಂವಾದ ನಡೆಸಿ, ಕಲಬುರಗಿ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ-ಮಾಹಿತಿ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.

ಶಿಕ್ಷಣದಲ್ಲಿ ಕೊನೆಯ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯನ್ನು ಮುಂದಿನ ೨ ವರ್ಷಗಳಲ್ಲಿ ಟಾಪ್ ೧೦ ಜಿಲ್ಲೆಗಳಲ್ಲಿ ತರುವ ಗುರಿ ಹೊಂದಲಾಗಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬೀದರ್ ಸಂಸದರಾದ ಭಗವಂತ ಖೂಬಾ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ಡಾ. ರಾಜಕುಮಾರ್ ಪಾಟೀಲ್ ತೇಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ್, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಸುನೀಲ್ ವಲ್ಯಾಪುರೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಗನ್ ಧಾರವಾಡಕರ್ ಮುಂತಾದವರು ಇದ್ದರು.

Latest Indian news

Popular Stories