ಶಿವಸೇನೆ ಕಾರ್ಯಕರ್ತರಿಂದ ಕನ್ನಡ ಬಾವುಟಕ್ಕೆ ಬೆಂಕಿ: ಕ್ರಮಕ್ಕೆ ಆಗ್ರಹಿಸಿ ಕನ್ನಡ ಪರಿಷತ್ ಮನವಿ

ಮಡಿಕೇರಿ ಡಿ 23. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವುದನ್ನು ಮತ್ತು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದು ಮತ್ತು
ಸಾರ್ವಜನಿಕ ಹಾಗೂ ಸರಕಾರಿ ಆಸ್ತಿಯನ್ನು ಹಾಳುಗೆಡವಿದ್ದು ಇವೆಲ್ಲವೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸದಸ್ಯರು ಮಾಡಿರುವ ಕಾರಣ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವಂತೆ ಮತ್ತು ಇವರು ನಡೆಸಿರುವ
ಕೃತ್ಯ ಅಕ್ಷಮ್ಯ ಅಪರಾಧವಾಗಿದೆ. ರಾಷ್ಟ್ರೀಯ ಒಕ್ಕೂಟದ ವ್ಯವಸ್ಥೆಯಲ್ಲಿ ಇದು ದೇಶದ ಏಕತೆಗೆ ಧಕ್ಕೆ ತರುವ ವಿಚಾರವಾಗಿದೆ.ಈ‌ ಘಟನೆಯನ್ನು ಕೊಡಗು ಜಿಲ್ಲಾ ಕಸಾಪ ತೀವ್ರವಾಗಿ ಖಂಡಿಸುತ್ತದೆ ಎಂಬ ಖಂಡನಾ ನಿರ್ಣಯವನ್ನು ಸರ್ವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಿದ್ದು ಸದರಿ ಪತ್ರವನ್ನು ಕೊಡಗು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಯವರಿಗೆ ಕಳುಹಿಸಲು ಅಪರ ಜಿಲ್ಲಾಧಿಕಾರಿಗಳಾದ ರಾಜು ಮೊಗವೀರ. ಕೆ. ವರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸಲ್ಲಿಸಿದರು. ಆ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಬಿ ಎನ್ ಮನುಶೆಣೈ, ಅಂಬೆಕಲ್ ನವೀನ್, ಶ್ರೀಧರ್ ಹೂವಲ್ಲಿ ಉಪಸ್ಥಿತರಿದ್ದರು.

Latest Indian news

Popular Stories

error: Content is protected !!