ಸೋಮವಾರಪೇಟೆ ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ ಅಧಿಕ

ಮಡಿಕೇರಿ ಜೂ.೧ : ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೨೪೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೧೨ ಆರ್.ಟಿ.ಪಿ.ಸಿ.ಆರ್ ಮತ್ತು ೩೧ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೩೨ ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ ೧೦೭ ಆರ್.ಟಿ.ಪಿ.ಸಿ.ಆರ್ ಮತ್ತು ೨೫ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ಪತ್ತೆಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ೫೦ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೬೧ ಪ್ರಕರಣಗಳು ಕಂಡು ಬಂದಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೪೫ ಆಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Latest Indian news

Popular Stories

error: Content is protected !!