ಕೊಡಗು : ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಮಡಿಕೇರಿ ಜೂ.೩ : ಕೊಡಗು ಜಿಲ್ಲೆಯಲ್ಲಿ ದ್ವಿಶತಕದ ಆಸುಪಾಸಿನಲ್ಲಿದ್ದ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ೩೦೦ ರ ಗಡಿ ದಾಟಿದೆ. ಗುರುವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೩೧೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೮೧ ಆರ್.ಟಿ.ಪಿ.ಸಿ.ಆರ್ ಮತ್ತು ೩೫ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಅಧಿಕ ಸೋಂಕಿತರಿದ್ದು, ೧೮೧ ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ೧೫೧ ಆರ್.ಟಿ.ಪಿ.ಸಿ.ಆರ್ ಮತ್ತು ೩೦ ಪ್ರಕರಣಗಳು ರ‍್ಯಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ೪೪ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೮೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ ೨೫,೨೭೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೧೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇಲ್ಲಿಯವರೆಗೆ ಒಟ್ಟು ೨೨,೪೮೩ ಮಂದಿ ಗುಣಮುಖರಾಗಿದ್ದು, ೨೪೫೯ ಸಕ್ರಿಯ ಪ್ರಕರಣಗವೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಟ್ಟು ೩೩೦ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೩೨೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.೨೦.೮೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ.

Latest Indian news

Popular Stories

error: Content is protected !!