ಸಮ್ಮತಿಯ ಲೈಂಗಿಕ ಸಂಪರ್ಕ ಅಪರಾಧ ಅಲ್ಲ ಎಂದ ಮಾಧುಸ್ವಾಮಿ

ಉಡುಪಿ: ಸಮ್ಮತಿಯ ಲೈಂಗಿಕ ಸಂಪರ್ಕ ಅಪರಾಧವಲ್ಲ ಎಂದಿರುವ ಸಚಿವ ಮಾಧುಸ್ವಾಮಿ, ರಮೇಶ್ ಜಾರಕಿಹೊಳಿ ಬೆಂಬಲಕ್ಕೆ ನಿಂತಿಸಿದ್ದಾರೆ.
ಆಕಸ್ಮಿಕ ಘಟನೆಗೆ ರಮೇಶ್ ಬಲಿಯಾಗಿದ್ದಾರೆ, ಸರ್ಕಾರ ಹಾಗೂ ಬಿಜೆಪಿಯಿಂದ ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲಾ ಶಾಸಕರಿಗೂ ಅವರ ಮೇಲೆ ಅನುಕಂಪವಿದೆ ಎಂದು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಮಾಧುಸ್ವಾಮಿ, ಸಿಡಿ ಪ್ರಕರಣ ಕಾನೂನಾತ್ಮಕ ಹಾಗೂ ನೈತಿಕ ವಿಚಾರವಾಗಿದೆ. ನೈತಿಕ ಹೊಣೆಹೊತ್ತು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಕಾನೂನಾತ್ಮಕವಾಗಿ ಸಮಸ್ಯೆ ಇದೆ ಅನಿಸಲ್ಲ. ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ. ಹೀಗೆಂದು ಸುಪ್ರೀಂ ಕೋರ್ಟ್ ಹೇಳಿದೆ. ಯುವತಿ ವರ್ತನೆ ನೋಡಿದರೆ ಇಚ್ಛಿಸಿ ಹೋಗಿದ್ದಾರೆ ಅನಿಸುತ್ತದೆ. ಹೀಗಾಗಿ ರಮೇಶ್ ಜಾರಕಿಹೊಳಿಗೆ ಶಿಕ್ಷೆಯಾಗಲಾರದು ಎಂದರು.
ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಯಾರನ್ನೂ ದೂರಲು ಆಗದು, ಎಲ್ಲವನ್ನು ಎದುರಿಸಬೇಕು ಅಷ್ಟೇ. ಇನ್ನು ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.

Latest Indian news

Popular Stories

error: Content is protected !!